ಕಂಪ್ಲಿ: ಕಂಪ್ಲಿ ಕ್ಷೇತ್ರದಲ್ಲಿ ವಸತಿ ಶಾಲೆ, ಕಾಲೇಜು ಹಾಗೂ ವಸತಿ ನಿಲಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ಹಾಸ್ಟೆಲ್‌ಗಳನ್ನು ಹಂತ-ಹಂತವಾಗಿ ಆರಂಭಿಸಲಾಗುವುದು. ಹೆಣ್ಣುಮಕ್ಕಳಿಗೆ ಬೇಗನೆ ಮದುವೆ ಮಾಡದೆ ಉನ್ನತ ಶಿಕ್ಷಣಕ್ಕೆ ಪಾಲಕರು ಅವಕಾಶ ಕಲ್ಪಿಸಬೇಕು ಎಂದರು.
ಬಿ.ಸಾಯಿನಿಧಿ ಭರತನಾಟ್ಯ ಪ್ರದರ್ಶಿಸಿದಳು. ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯ ಸಿ.ಆರ್.ಹನುಮಂತ, ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ನಿವಾಸರಾವ್, ಚಾನಾಳ್ ಚನ್ನಬಸವರಾಜ, ಯುವ ಕಾಂಗ್ರೆಸ್ ಅಧ್ಯಕ್ಷ ರಿಯಾಜ್, ಪ್ರಧಾನ ಕಾರ್ಯದರ್ಶಿ ರಘುನಾಯಕ, ಪ್ರಮುಖರಾದ ಬಿ.ನಾರಾಯಣಪ್ಪ, ಕೆ.ಷಣ್ಮುಖಪ್ಪ, ಬಿ.ಸಿದ್ದಪ್ಪ, ಮಲ್ಲಿಕಾರ್ಜುನ, ಎಂ.ಸಿ.ಮಾಯಪ್ಪ, ಅಬ್ದುಲ್ ಮುನಾಫ್, ಕೆ.ಚಂದ್ರಶೇಖರ, ಎಂ.ಗೋಪಾಲ, ಮೆಹಮೂದ್ ಇತರರಿದ್ದರು.