ಉಪ್ಪಾರಹಳ್ಳಿಯಲ್ಲಿ ನೆಟವರ್ಕ್ ಸಮಸ್ಯೆಗೆ ಸಂಬಂಧಿಸಿದಂತೆ ತಹಸೀಲ್ದಾರ್ ಜೂಗಲ ಮಂಜುನಾಯಕ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಗ್ರಾಮಸ್ಥರಾದ ಹನುಮಯ್ಯಗೌಡ, ಮಾಯಪ್ಪ, ಗುರು, ತಿಮ್ಮಪ್ಪ, ಗುರಪ್ಪ ಬಾದನಟ್ಟಿ, ಹನುಮಯ್ಯ ಇತರರಿದ್ದರು. 
ಜಿಲ್ಲೆ

ಜಾತಿ ಗಣತಿಗೂ ತೊಂದರೆ

ಶ್ರೀನಾಥ

ಕಂಪ್ಲಿ: ಉಪ್ಪಾರಹಳ್ಳಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ನೆಟ್‌ವರ್ಕ್ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಜೂಗಲ ಮಂಜುನಾಯಕ ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನಿಸಿ ನೆಟ್‌ವರ್ಕ್ ಕಲ್ಪಿಸುವ ಭರವಸೆ ನೀಡಿದರು.

ಗ್ರಾಮಸ್ಥ ಹನುಮಯ್ಯಗೌಡ ಮಾತನಾಡಿ, ಗ್ರಾಮದಲ್ಲಿ ಮೊಬೈಲ್ ನೆಟ್‌ವರ್ಕ್ ಸೌಲಭ್ಯವಿಲ್ಲ, ಕಳೆದ ಐದು ವರ್ಷಗಳಿಂದ ನೆಟ್‌ವರ್ಕ್ ಕಲ್ಪಿಸುವಂತೆ ಒತ್ತಾಯಿಸಿದ್ದರೂ ಬೇಡಿಕೆ ಈಡೇರಿಲ್ಲ ಎಂದು ದೂರಿದರು.

ತಹಸೀಲ್ದಾರ್ ಮಾತನಾಡಿ, ಸಮೀಕ್ಷೆಯಿಂದ ಯಾರೂ ಹೊರಗುಳಿಯಬಾರದು. ಸಮೀಕ್ಷೆಗೆ ತೊಂದರೆಯಾಗದ ಕ್ರಮ ಕೈಗೊಳ್ಳಲಾಗುವುದು. ಗ್ರಾಮಕ್ಕೆ ನೆಟ್‌ವರ್ಕ್ ಸೌಲಭ್ಯ ಕಲ್ಪಿಸುವ ಬಗ್ಗೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಆರ್‌ಐ ವೈ.ಎಂ.ಜಗದೀಶ, ಗಣತಿದಾರ ಮಲ್ಲಿಕಾರ್ಜುನ, ವಿಎ ಅಬ್ದುಲ್, ಗ್ರಾಮಸ್ಥರಾದ ಮಾಯಪ್ಪ, ಗುರು, ತಿಮ್ಮಪ್ಪ, ಗುರಪ್ಪ ಬಾದನಟ್ಟಿ, ಹನುಮಯ್ಯ, ಗುರಿಕಾರ ಹನುಮಂತಪ್ಪ ಇತರರಿದ್ದರು.