ಜಿಲ್ಲೆ

ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ

Gadag - Shivanand Hiremath

ಗದಗ: ಸಂತ ಶ್ರೇಷ್ಠ ಕನಕದಾಸ ಜಯಂತಿಯನ್ನು ನಗರದ‌ ಹಾತಲಗೇರಿ ನಾಕಾದಲ್ಲಿ ಗುರುವಾರದಂದು ಆಚರಿಸಲಾಯಿತು. ವಿಧಾನ‌ ಪರಿಷತ ಸದಸ್ಯ ಎಸ್.ವಿ.ಸಂಕನೂರ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರ ಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ‌ ನಿರ್ದೆಶಕ ವೀರಯ್ಯಸ್ವಾಮಜ ಹಿರೇಮಠ, ನಗರಸಭೆ ಸದಸ್ಯರು, ಸಮುದಾಯದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.