ಜಿಲ್ಲೆ

ಮೈಸೂರಿನಲ್ಲಿ ನ.11ಕ್ಕೆ ಕನಕದಾಸ, ಒನಕೆ ಓಬವ್ವ ಜಯಂತಿ

ಮೈಸೂರು: ಕನಕದಾಸ ಜಯಂತಿ ಹಾಗೂ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ನ.11 ರಂದು ಕಲಾಮಂದಿರದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಬಿ.ಮಂಜುನಾಥ ಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಮಾತನಾಡಿ, ಕನಕದಾಸ ಜಯಂತಿ ಹಾಗೂ ಒನಕೆ ಓಬವ್ವ ಜಯಂತಿಯ ಸಭಾ ಕಾರ್ಯಕ್ರಮವನ್ನು ಕಲಾಮಂದಿರದಲ್ಲಿ ಮಧ್ಯಾಹ್ನ 12.30ಕ್ಕೆ ಆಯೋಜಿಸಲಾಗುವುದು. ಅಂದು ಬೆಳಗ್ಗೆ 10ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಮೆರವಣಿಗೆಗೆ ಕಲಾತಂಡಗಳು ಮೆರಗು ನೀಡಲಿವೆ ಎಂದರು.

ಸಭೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಪಾಲಿಕೆ ಉಪ ಆಯುಕ್ತೆ ಸವಿತಾ ಹಾಗೂ ಇತರರು ಇದ್ದರು.