ಹರಪನಹಳ್ಳಿಯ ಮಿನಿವಿಧಾನಸೌಧ ಸಭಾಂಗಣದಲ್ಲಿ ಕನಕದಾಸರ ಜಯಂತಿ ಪೂರ್ವಭಾವಿ ಸಭೆ ಜರುಗಿತು. ತಹಸೀಲ್ದಾರ ಗಿರೀಶಬಾಬು, ಗೋಣಿಬಸಪ್ಪ ಸೇರಿ ಇತರರಿದ್ದರು. 
ಜಿಲ್ಲೆ

ಕನಕದಾಸರ ಜಯಂತಿಗೆ ಭರ್ಜರಿ ಸಿದ್ಧತೆ

Kopala - Desk - Eraveni

ಹರಪನಹಳ್ಳಿ: ಕನಕದಾಸರ 536ನೇ ಜಯಂತಿಯನ್ನು ನ.30ರಂದು ಪಟ್ಟಣದ ತಾಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ತಾಲೂಕು ಆಡಳಿತದಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ಗಿರೀಶ ಬಾಬು ತಿಳಿಸಿದರು.

ಪಟ್ಟಣದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪಟ್ಟಣದ ಹರಿಹರ ಸರ್ಕಲ್ ವೃತ್ತದಿಂದ ತಾಲೂಕು ಪಂಚಾಯಿತಿವರೆಗೂ ಕನಕದಾಸರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳಿಂದ ಮೆರವಣಿಗೆ ನಡೆಯಲಿದೆ.

ಬಳಿಕ ಸಾಮಾರ್ಥ್ಯ ಸೌಧದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು. ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ತಲಾ ಮೂರು ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಗುವುದು ಮತ್ತು ಕನಕದಾಸರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದರು.

ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದರು. ತಾಲೂಕು ಕುರುಬ ಸಮಾಜದ ಅಧ್ಯಕ್ಷ, ವಕೀಲ ಗೋಣಿಬಸಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.