ಕನಕಗಿರಿ : ಪಂಚ ಗ್ಯಾರಂಟಿ ತಾಲೂಕು ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಸಮಿತಿ ಸದಸ್ಯರ ಪದಗ್ರಹಣ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಯೋಜನೆಯಲ್ಲಿ ಕೊಪ್ಪಳವನ್ನು ನಂ.1 ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಎಲ್ಲ ಪದಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದರು. ತಾಲೂಕು ಸಮಿತಿ ಅಧ್ಯಕ್ಷ ಹಜರತ್ ಹುಸೇನ್ ಹಾಗೂ ತಾಲೂಕು ಪಂಚಾಯಿತಿ ಇಒ ಕೆ.ರಾಜಶೇಖರ ಮಾತನಾಡಿದರು. ಜಿಪಂ ಮಾಜಿ ಸದಸ್ಯರಾದ ವೀರೇಶ ಸಮಗಂಡಿ, ತಾಪಂ ಮಾಜಿ ಅಧ್ಯಕ್ಷರಾದ ಬಸವಂತಗೌಡ, ಮಲ್ಲಿಕಾರ್ಜುನ ಗೌಡ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪ್ರಮುಖರಾದ ಸಿದ್ದಪ್ಪ ನೀರಲೂಟಿ ಇತರರಿದ್ದರು.