ಪರಿಸರ ದಿನಾಚರಣೆ ನಿಮಿತ್ತ ಕನಕಗಿರಿಯ ಲಕ್ಷ್ಮೀದೇವಿ ಕೆರೆಯಲ್ಲಿ ಗುರುವಾರ ಪಪಂ ಅಧ್ಯಕ್ಷೆ ಹುಸೇನ್‌ಬೀ ಚಳ್ಳಮರದ ಸಸಿ ನೆಟ್ಟರು. ಉಪಾಧ್ಯಕ್ಷ ಕಂಠಿರಂಗ ನಾಯಕ, ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಇತರರಿದ್ದರು.  
ಜಿಲ್ಲೆ

ಗಾಳಿ, ನೀರು, ಮಣ್ಣು ಕಲುಷಿತ

ಕನಕಗಿರಿ: ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಹೇಳಿದರು.

ಇಲ್ಲಿನ ಲಕ್ಷ್ಮೀದೇವಿ ಕೆರೆ ದಡದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು. ನಿಸರ್ಗದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿ ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದರು.

ಮಾನವ ಸೇರಿದಂತೆ ಪ್ರತಿಯೊಂದು ಜೀವ ಸಂಕುಲಕ್ಕೆ ಆಹಾರ, ಗಾಳಿ, ನೀರು ಇತರ ಅಗತ್ಯತೆಗಳು ಪರಿಸರದಿಂದ ಲಭಿಸುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಮನುಷ್ಯ ಆಧುನಿಕ ಬದುಕಿಗಾಗಿ ಪರಿಸರ ನಾಶ ಮಾಡುತ್ತಿದ್ದಾನೆ. ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಕಲುಷಿತಗೊಂಡಿದೆ ಎಂದರು.

ಪಪಂ ಅಧ್ಯಕ್ಷೆ ಹುಸೇನ್‌ಬೀ ಚಳ್ಳಮರದ, ಉಪಾಧ್ಯಕ್ಷ ಕಂಠಿರಂಗ ನಾಯಕ, ಸಿಬ್ಬಂದಿ ಸುಭಾಷ್‌ಚಂದ್ರ, ರವಿ, ಟಿ.ಜೆ. ವಿಜಯ್, ಮಂಜುನಾಥ ನಾಯಕ, ಪ್ರಕಾಶ, ಪುರುಷೋತ್ತಮ್, ಆಂಜನೇಯ ಇತರರಿದ್ದರು.