ಕನಕಗಿರಿಯಲ್ಲಿ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನದ ಜಾಗೃತಿಗಾಗಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‌್ಯಾಲಿಗೆ ಪಪಂ ಅಧ್ಯಕ್ಷ ರವೀಂದ್ರ ಸಜ್ಜನ್ ಚಾಲನೆ ನೀಡಿದರು.  
ಜಿಲ್ಲೆ

ನುಡಿಹಬ್ಬಕ್ಕೆ ಮನೆಯವರೆಲ್ಲ ಬನ್ನಿ - ಪಪಂ ಅಧ್ಯಕ್ಷ ರವೀಂದ್ರ ಸಜ್ಜನ್ ಕರೆ

ಕನಕಗಿರಿ: ತಾಲೂಕು ಕೇಂದ್ರವಾದ ಬಳಿಕ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮನೆಯವರೆಲ್ಲ ಬಂದು ಯಶಸ್ವಿಗೊಳಿಸಬೇಕೆಂದು ಪಪಂ ಅಧ್ಯಕ್ಷ ರವೀಂದ್ರ ಸಜ್ಜನ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಸಮ್ಮೇಳನದ ಜಾಗೃತಿಗಾಗಿ ಕಸಾಪ ತಾಲೂಕು ಘಟಕದಿಂದ ಆಯೋಜಿಸಲಾಗಿದ್ದ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕು ಸಮ್ಮೇಳನವು ಜಿಲ್ಲೆಗೆ ಮಾದರಿಯಾಗುವಂತೆ ಪಟ್ಟಣದ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ತಿಳಿಸಿದರು. ಕಸಾಪ ಪದಾಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಬೈಕ್‌ಗಳಿಗೆ ಕನ್ನಡ ಧ್ವಜ ಕಟ್ಟಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಮ್ಮೇಳನದ ಕುರಿತು ಜಾಗೃತಿ ಮೂಡಿಸಿದರು.