ಜಿಲ್ಲೆ

ಕನಕಪುರದಲ್ಲಿ ಮತ್ತೊಬ್ಬ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

ರಾಮನಗರ: ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿರುವ ಘಟನೆ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ರಾಮಕೃಷ್ಣ (52) ಮೃತಪಟ್ಟ ವ್ಯಕ್ತಿ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವದ ಕೋಡಿಹಳ್ಳಿ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗ್ರಾಮಕ್ಕೆ ಹೊಂದಿಕೊಂಡಂತೆ ಅರಣ್ಯವಿದ್ದು, ರಾಮಕೃಷ್ಣ ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ಈ ವೇಳೆ ಕಾಡಾನೆ ದಾಳಿ ಮಾಡಿದೆ. ಆನೆ ದಾಳಿಗೆ ರಾಮಕೃಷ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೋಡಿಹಳ್ಳಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದರೊಂದಿಗೆ ಒಂದು ತಿಂಗಳ ಅಂತರದಲ್ಲಿ ಜಿಲ್ಲೆಯಲ್ಲಿ ಆನೆ ದಾಳಿಗೆ ಬಲಿಯಾದ ಮೂರನೇ ವ್ಯಕ್ತಿ ಇವರಾಗಿದ್ದಾರೆ. ಮೃತ ದೇಹವನ್ನು ಕನಕಪುರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದ್ದು, ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.