ಕುಶಾಲನಗರ:
ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಯ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿಗೆ ಪೂರಕವಾದ ಯೋಜನೆಗೆ ಹೆಚ್ಚು ಒತ್ತು ನೀಡುವ ಮೂಲಕ ದೇವಾಲಯದ ಪ್ರಗತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ರಾಮನವಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುಣಿಯೋಣಾ ಬಾರ ನೃತ್ಯ ಸ್ಪರ್ಧೆ ಉದ್ಘಾಟಿಸಿ ಮಾತಾನಾಡಿದರು.
ಈಗಾಗಲೇ ದೇವಾಲಯದ ಸಮೀಪದಲ್ಲಿ ಕಾವೇರಿ ನದಿ ನೀರು ಕೊರೆತ ತಡೆಯಲು ತಡೆಗೋಡೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದ್ದು, ಕಾಮಗಾರಿ ನಡೆದಿದೆ. ಮುಂದಿನ ದಿನಗಳಲ್ಲಿ ಕಣಿವೆ ತೂಗು ಸೇತುವೆ ಅಭಿವೃದ್ಧಿಪಡಿಸಲಾಗುವುದು ಎಂದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿದರು. ಸಾಹಿತಿ , ಭಾರದ್ವಾಜ್ ಕೆ. ಅನಂದತೀರ್ಥ , ದೇವಾಲಯ ಸಮಿತಿ ಅಧ್ಯಕ್ಷ ಕೆ. ಎನ್. ಸುರೇಶ್, ಸಹ ಕಾರ್ಯದರ್ಶಿ ಮಾಧವ, ಉಪಾಧ್ಯಕ್ಷ ಕೆ.ಕೆ. ಮಂಜುನಾಥ ಸ್ವಾಮಿ, ಗೌರವ ಅಧ್ಯಕ್ಷ ಇ. ಎಸ್. ಗಣೇಶ್, ಸಹ ಕಾರ್ಯದರ್ಶಿ ಕೆ.ಎಲ್. ಮಹೇಶ್ ಕುಮಾರ್, ನಿರ್ದೇಶಕರಾದ ಆರ್.ಆರ್. ಮಧು, ಶಿರಗಜೆ ನವೀನ್, ಜಯರಾಂ ಮತ್ತಿತರರು ಇದ್ದರು.