ಜಿಲ್ಲೆ

ಕನ್ನಡ ವಿರೋಧಿ ಸರ್ಕಾರಿ ನೌಕರರ ವಿರುದ್ಧ ಕ್ರಮ ಸ್ವಾಗತಾರ್ಹ

ಬೆಂಗಳೂರು: ಬೈಲಹೊಂಗಲದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡ ಕಡೆಗಣಿಸಿ, ಕೇವಲ ಆಂಗ್ಲ ಭಾಷೆಯಲ್ಲಿ ಮುದ್ರಿಸಿ ಕಾರಣ ನೀಡದ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಕಾಲೇಜು ಶಿಕ್ಷಣ ಇಲಾಖೆ ಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಿಸಿದೆ. ಸರ್ಕಾರಿ ನೌಕರರಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಕುರಿತಾದ ಅಭಿಮಾನ ಜಾಗೃತವಿರಬೇಕಾದುದು ಅವರ ಮೂಲಭೂತ ಜವಾಬ್ದಾರಿಗಳಲ್ಲಿ ಒಂದಾಗಿದ್ದು, ಇಂತಹ ಕರ್ತವ್ಯಲೋಪಕ್ಕೆ ಸರ್ಕಾರವು ಯಾವುದೇ ಮುಲಾಜನ್ನು ಹೊಂದಬೇಕಿಲ್ಲ. ಕಾಲೇಜು ಶಿಕ್ಷಣ ಇಲಾಖೆಯ ಈ ಕ್ರಮ ಬೇರೆ ಇಲಾಖೆಗಳಿಗೆ ಮಾದರಿಯಾಗಬೇಕಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿನಂದಿಸಿದ್ದಾರೆ.