ಜಿಲ್ಲೆ

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಸಮಿತಿ

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಆಯ್ಕೆ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಸರ್ಕಾರ 64 ಮಂದಿ ಒಳಗೊಂಡ ಸಲಹಾ ಸಮಿತಿ ರಚಿಸಿದೆ.

ಸಮಿತಿಯು ಸಾಹಿತ್ಯ, ವೈದ್ಯಕೀಯ, ಕೃಷಿ, ಸಮಾಜಸೇವೆ, ಚಲನಚಿತ್ರ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡಿದೆ. ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಪ್ರತಿನಿಧಿಗಳು ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಪ್ರಸಕ್ತ ಸಾಲಿಗೆ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಕೈ ಬಿಡಲಾಗಿದೆ. ಪ್ರಶಸ್ತಿಯು ತಲಾ 5 ಲಕ್ಷ ರೂ. ನಗದು ಹಾಗೂ 25 ಗ್ರಾಂ. ಚಿನ್ನದ ಪದಕ ಒಳಗೊಂಡಿರಲಿದೆ.