ಜಿಲ್ಲೆ

ಗಡಿನಾಡಿನಲ್ಲಿ ಕನ್ನಡ ಜಾಗೃತಿ-ಸಾಂಸ್ಕೃತಿಕ ಸಂಭ್ರಮ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿದ್ಯಾವರ್ಧಕ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಳಗಾವಿ ಜಿಲ್ಲೆ ಕಾಗವಾಡದ ಶಿವಾನಂದ ಕಾಲೇಜು ಸಹಯೋಗದಲ್ಲಿ ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮವನ್ನು ಏ. 24ರಂದು ಶಿವಾನಂದ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು 9 ಗಂಟೆಗೆ ಚನ್ನಮ್ಮ ವೃತ್ತದಿಂದ ಕಾಲೇಜುವರೆಗೆ ಮೆರವಣಿಗೆ ನಡೆಯಲಿದೆ. ನಂತರ 10 ಗಂಟೆಗೆ ಶ್ರೀ ಯತೀಶ್ವರಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಡಾ. ಗುರುಲಿಂಗ ದಬಾಲೆ, ಶಂಕರ ಹಲಗತ್ತಿ, ಪ್ರೊ. ಬಿ.ಎ. ಪಾಟೀಲ, ವಿ.ಎಸ್​. ತುಗಶೆಟ್ಟಿ, ಜ್ಯೋತಿಕುಮಾರ ಪಾಟೀಲ ಆಗಮಿಸುವರು. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದರು.

ಮಧ್ಯಾಹ್ನ 12 ಗಂಟೆಗೆ ಗಡಿನಾಡ ಕನ್ನಡಿಗರ ಸಮಸ್ಯೆಗಳು ಮತ್ತು ಸವಾಲುಗಳು-ಒಂದು ಅವಲೋಕನ ವಿಚಾರ ಸಂಕಿರಣ ನಡೆಯಲಿದ್ದು, ಯ.ರು. ಪಾಟೀಲ ಆಶಯ ನುಡಿ ಮಂಡಿಸುವರು. ಡಾ. ಸುರೇಶ ಹನಗುಂಡಿ, ಡಾ. ಪ್ರಿಯಂವದಾ ಹುಲಗಬಾಳಿ, ಪ್ರೊ. ವಿಜಯ ಧಾರವಾಡ ವಿಷಯ ಮಂಡಿಸುವರು. ಡಾ. ಪ್ರಭುಚನ್ನಬಸವ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು ಎಂದರು.

ಮಧ್ಯಾಹ್ನ 2.30ಕ್ಕೆ ಕವಿಗೋಷ್ಠಿ ನಡೆಯಲಿದ್ದು, ಡಾ. ದೇವಿಕಾ ನಗರಕರ ಆಶಯ ನುಡಿಗಳನ್ನಾಡುವರು. ಅತಿಥಿಗಳಾಗಿ ಬಸವರಾಜ ಗಾರ್ಗಿ, ಅವಳೇಕುಮಾರ ಆಗಮಿಸುವರು. ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಜೆ 5 ಗಂಟೆಗೆ ಸಾಧಕರಿಗೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಡಾ. ವಿ.ಎಸ್​. ಮಾಳಿ ಸಮಾರೋಪ ನುಡಿಗಳನ್ನಾಡುವರು. ಅತಿಥಿಗಳಾಗಿ ಶಾಸಕ ಭರಮಗೌಡ ಕಾಗೆ, ಡಾ. ಎಂ.ಬಿ. ಹೂಗಾರ, ಪ್ರೊ. ಪಿ.ಬಿ. ನಂದಾಳೆ, ಸ್ವಪ್ನೀಲ್​ ಪಾಟೀಲ ಆಗಮಿಸುವರು. ಡಾ. ಎಸ್​.ಎ. ಕರ್ಕಿ ಅಧ್ಯಕ್ಷತೆ ವಹಿಸುವರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಶಿವಾನಂದ ಭಾವಿಕಟ್ಟಿ, ಸತೀಶ ತುರಮರಿ, ಗುರು ಹಿರೇಮಠ, ವೀರಣ್ಣ ಒಡ್ಡೀನ, ಇದ್ದರು.