ಜಿಲ್ಲೆ

ಗಡಿನಾಡಿನಲ್ಲಿ ಕನ್ನಡ ಜಾಗೃತಿ, ಸಾಂಸ್ಕೃತಿಕ ಸಂಭ್ರಮ 18ರಂದು

ಧಾರವಾಡ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವು ಬೆಳಗಾವಿಯ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಶಿವಕುಮಾರ ಸಂಬರಗಿಮಠ ಸಭಾಭವನದಲ್ಲಿ ಅ.18ರಂದು ಬೆಳಗ್ಗೆ 10 ಗಂಟೆಗೆ ಗಡಿ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸುವುದಕ್ಕೆ `ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಗದಗ ಡಂಬಳದ ಡಾ.ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವ ಸತೀಶ್ ಜಾರಕಿಹೊಳಿ ಸಂಘದ ವಾರ್ಷಿಕ ವರದಿ ಬಿಡುಗಡೆ ಮಾಡುವರು. ಸಚಿವೆ ಹೆಬ್ಬಾಳ್ಕರ್ ಸಂಘದ ಪರಿಚಯದ ಕಿರುಹೊತ್ತಿಗೆ ಬಿಡುಗಡೆ ಮಾಡುವರು. ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್ ಅತಿಥಿಯಾಗಿ ಆಗಮಿಸುವರು. ಪ್ರಾಽಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಡಾ.ದ.ರಾ ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ಸರಜು ಕಾಟ್ಕರ್ ಭಾಗವಹಿಸುವರು. ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್.ಚೆನ್ನೂರ, ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಭಾಗವಹಿಸುವರು ಎಂದರು.
ಅ.18ರಂದು ಮದ್ಯಾಹ್ನ 12 ಗಂಟೆಗೆ `ಗಡಿನಾಡ ಕನ್ನಡಿಗರ ಸಮಸ್ಯೆಗಳು ಮತ್ತು ಸವಾಲುಗಳು ಒಂದು ಅವಲೋಕನ' ವಿಚಾರ ಸಂಕಿರಣ ನಡೆಯಲಿದೆ. ಮದ್ಯಾಹ್ನ 2 ಗಂಟೆಗೆ ಕವಿಗೋಷ್ಠಿ ನಡೆಯಲಿದೆ. ಸಂಜೆ 4.15 ಗಂಟೆಗೆ ಸಾಧಕರಿಗೆ ಸನ್ಮಾನ ಹಾಗೂ ಸಮರೋಪ ಸಮಾರಂಭ ನಡೆಯಲಿದೆ. ಬೆಳಗಾವಿಯ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.
ಕಾರ್ಯಕ್ರಮದಲ್ಲಿ ಪರಿಸರ ಹೋರಾಟಗಾರ ಶಿವಾಜಿ ಕಾಗಣಿಕರ, ಸಮಾಜ ಸೇವಕಿ ಕವಿತಾ ಕಾಂಬಳೆ, ಶಿಕ್ಷಣ ಕ್ಷೇತ್ರದಲ್ಲಿ ಶಾಂತಾದೇವಿ ಹಾಲಪ್ಪನವರ, ರಂಗಭೂಮಿಯಲ್ಲಿ ಬಿ.ಎಸ್.ಗವಿಮಠ, ದಲಿತ ಚಳುವಳಿ ಕಲ್ಲಪ್ಪ ಕಾಂಬಳೆ, ಸಾಂಸ್ಕೃತಿಕ ಸಂಘಟನೆಯಲ್ಲಿ ಎಸ್.ಡಿ.ಕರ್ಕಿ, ಸಾಹಿತ್ಯದಲ್ಲಿ ನೀಲಗಂಗಾ ಚರಂತಿಮಠ, ಡಾ.ಹೇಮಂತ ಸೋನೋಳಿ, ಎಸ್.ಸುಳಕೊಡೆ, ಮಕ್ಕಳ ಸಾಹಿತ್ಯದಲ್ಲಿ ಎಂ.ಎಂ ಸಂಗಣ್ಣನವರ್, ಕನ್ನಡ ಕಾಯಕ ಕ್ಷೇತ್ರ ಸೇವೆ ಪರಿಗಣಿಸಿ ವಿಜಯ ಬಡಿಗೇರ ಹಾಗೂ ಆನಂದ ಪುರಾಣಿಕ ಅವರ ಸಾಧನೆಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ವೀರಣ್ಣ ವಡ್ಡಿನ, ಜೀನದತ್ತ ಹಡಗಲಿ, ಶಿವಾನಂದ ಭಾವಿಕಟ್ಟಿ, ವಿಶ್ವೇಶ್ವರಿ ಹಿರೇಮಠ, ಧನವಂತ ಹಾವಜಗೋಳ, ಸತೀಶ ತುರಮರಿ ಸುದ್ದಿಗೋಷ್ಠಿಯಲ್ಲಿದ್ದರು.