ಬೆಳಗಾವಿ ನಗರದ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಆವರಣದಲ್ಲಿ ಕೆಎಲ್‌ಇ ವಿಶ್ವವಿದ್ಯಾಲಯ(ಸ್ವಾಯತ್ತ) ಮತ್ತು ಕನ್ನಡ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ರೂಪಕ ವಾಹನಕ್ಕೆ ಜೆಎನ್‌ಎಂಸಿ ಪ್ರಾಂಶುಪಾಲ ಡಾ.ಎನ್.ಎಸ್.ಮಹಾಂತಶೆಟ್ಟಿ ಚಾಲನೆ ನೀಡಿದರು. ಡಾ.ವಿ.ಎ.ಕೋಠಿವಾಲೆ ಇತರರಿದ್ದರು. 
ಜಿಲ್ಲೆ

ಕನ್ನಡ ಬೆಳವಣಿಗೆಗೆ ಕೆಎಲ್‌ಇ ಕೊಡುಗೆ ಅಪಾರ

ಶಂಕರ ಗೆಜ್ಜಿ

ಬೆಳಗಾವಿ: ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿರುವ ಮಹನೀಯರನ್ನು ಸ್ಮರಿಸುತ್ತ, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಗಡಿಯಲ್ಲಿ ಕನ್ನಡ ಉಳಿಸಿ ಬೆಳೆಸುವಲ್ಲಿ ಕೆಎಲ್‌ಇ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ಜೆಎನ್‌ಎಂಸಿ ಪ್ರಾಂಶುಪಾಲ್ ಡಾ.ಎನ್.ಎಸ್.ಮಹಾಂತಶೆಟ್ಟಿ ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಆವರಣದಲ್ಲಿ ಕೆಎಲ್‌ಇ ವಿಶ್ವವಿದ್ಯಾಲಯ(ಸ್ವಾಯತ್ತ) ಮತ್ತು ಕನ್ನಡ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ರೂಪಕ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೆಎಲ್‌ಇ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ವಿ.ಎ.ಕೋಠಿವಾಲೆ ಮಾತನಾಡಿ, ಕನ್ನಡ ಭಾಷೆಗೆ ತನ್ನದೆಯಾದ ವಿಶೇಷತೆಯಿದೆ.

ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ನಾಡು,ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರು ಹೆಮ್ಮೆ ಪಡಬೇಕು ಎಂದರು. ಘಟಕದ ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರು, ವಿಶ್ವವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.