ಜಿಲ್ಲೆ

ಹೆಬ್ರಿಯಲ್ಲಿ ಕನ್ನಡದ ಕಂದ ಕಾರ್ಯಕ್ರಮ

ಇಂದಿರಾ ಎನ್ ಕೆ

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕದಿಂದ ಹೆಬ್ರಿಯ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡದ ಕಂದ ಕಾರ್ಯಕ್ರಮ ಶನಿವಾರ ನಡೆಯಿತು.

ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಪ್ರಬಂಧ, ಭಾಷಣ ಸ್ಪರ್ಧೆ, ಕವನ ರಚನಾ ಸ್ಪರ್ಧೆ ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ ಎಚ್.ಎಂ., ಮುಖ್ಯಶಿಕ್ಷಕ ಶರತ್ ಶೆಟ್ಟಿ, ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಉದ್ಯಮಿ ಯೋಗೀಶ ಭಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧಿಕಾರಿ ಮನೋಹರ ಪಿ., ಎಸ್‌ಡಿಎಂಸಿ ಉಪಾಧ್ಯಕ್ಷೆ ಸೌಮ್ಯ ಆಚಾರ್ಯ, ಹೆಬ್ರಿ ತಾಲೂಕು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪ್ರವೀಣಕುಮಾರ್ ಎಸ್., ಮಂಜುನಾಥ ಕೆ.ಶಿವಪುರ, ಪದಾಧಿಕಾರಿಗಳಾದ ವಸಂತ ಶೆಟ್ಟಿ ಬೆಳ್ವೆ, ವೀಣಾ ಆರ್.ಭಟ್, ಸುರೇಶ ಭಂಡಾರಿ, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.