ಸಂಡೂರು: ತಾಲೂಕು ಕಸಾಪ ಮಾಜಿ ಅಧ್ಯಕ್ಷ ಬಸವರಾಜ ಮಸೂತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಧಾರವಾಡದ ಕರ್ನಾಟಕ ಯೂನಿವರ್ಸಿಟಿಯಲ್ಲಿ 1972ರಲ್ಲಿ ಎಂಎ ಮುಗಿಸಿದ ಇವರು ಸಂಡೂರು ರಾಜಮನೆತನದ ಶಾಲೆಯಲ್ಲಿ ಕೆಲಸಕ್ಕೆ ಸೇರಿದರು.
ಕಸಾಪ ತಾಲೂಕು ಅಧ್ಯಕ್ಷರಾಗಿ 1990ರಿಂದ 2000 ವರಿಗೆ ಸೇವೆ ಸಲ್ಲಿಸಿದ್ದಾರೆ. 1991ರಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡಿದ್ದಾರೆ. 2005ರಿಂದ ಎರಡು ಅವಧಿಗೆ ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1972ರಿಂದ 2003ರವರೆಗೆ ಘೋರ್ಪಡೆಯವರ ಜೂನಿಯರ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.