ತುರುವೇಕೆರೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಡಿ.ಪಿ.ರಾಜು ಮಾಜಿ ಅಧ್ಯಕ್ಷ ಸಾ.ಶಿ.ದೇವರಾಜು, ಪರಿಷತ್​ ಸದಸ್ಯರಾದ ಮಂಜಯ್ಯಗೌಡ, ಕೆಂಪರಾಜು, ಷಣ್ಮುಕಪ್ಪ, ರಾಮಣ್ಣ ಇದ್ದರು. 
ಜಿಲ್ಲೆ

22ರಂದು ಕನ್ನಡ ಸಾಹಿತ್ಯ ಸಮ್ಮೇಳನ

ಸತ್ಯ ಗಣಪತಿ ಮಂಟಪದಲ್ಲಿ ಆಯೋಜನೆ -ಸಮ್ಮೇಳನದ ಅಧ್ಯಕ್ಷ ಪ್ರೊ.ಸಂಪಿಗೆ ತೋಂಟದಾರ್ಯ

ತುರುವೇಕೆರೆ: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್​ನಿಂದ 6ನೇ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆ.22ರಂದು ಪಟ್ಟಣದ ಸತ್ಯ ಗಣಪತಿ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್​

ತಾಲೂಕು ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ತಹಸೀಲ್ದಾರ್​ ಕುಂ.ಇ.ಅಹಮದ್​ ರಾಷ್ಟ್ರ ಧ್ವಜಾರೋಹಣ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶೀಲಾ ನಾಡ ಧ್ವಜಾರೋಹಣ ನೆರವೇರಸಲಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಿಂದ ಸಮ್ಮೇಳನದ ಅಧ್ಯಕ್ಷ ಪ್ರೊ.ಸಂಪಿಗೆ ತೋಂಟದಾರ್ಯ ಅವರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುತ್ತದೆ. ಬೆಳಗೆ 11ಕ್ಕೆ ಸಮಾರಂಭ ಪ್ರಾರಂಭವಾಗಲಿದ್ದು, ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು, ಸಚಿವ ವಿ.ಸೋಮಣ್ಣ ಕಲ್ಪವಿಜಯ ನೆನಪಿನ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ ಎಂದರು.

ಸಮ್ಮೇಳನದಲ್ಲಿ 3 ಗೋಷ್ಠಿಗಳ ನಂತರ ಶಾಲಾ ಮಕ್ಕಳಿಂದ ಸಾಂಸತಿಕ ಕಾರ್ಯಕ್ರಮ ನೆಡೆಯಲಿದೆ. ಸಂಜೆ 4ಕ್ಕೆ ಅಜೀವ ಸದಸ್ಯರ ಸಭೆ, 5ಕ್ಕೆ ಸಮಾರಂಭ ನೆಡೆಯಲಿದ್ದು, ಕಾಡಸಿದ್ದೇಶ್ವರ ಮಠದ ಶಿವಯೋಗೀಶ್ವರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್​ ಘನ ಉಪಸ್ಥಿತಿ ಹಾಗೂ ಶಾಸಕ ಎಂ.ಟಿ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಎಂ.ಟಿ.ಕೃಷ್ಣಪ್ಪ ಸಮ್ಮೇಳಾನಾಧ್ಯಕ್ಷರಿಗೆ ಗೌರವ ಸಮರ್ಪಿಸಲಿದ್ದು, ಮಾಜಿ ಸಚಿವ ಕೆ.ಎನ್​.ರಾಜಣ್ಣ ಮತ್ತು ಕಸಾಪ ಅಧ್ಯಕ್ಷ ಮಹೇಶ್​ ಜೋಷಿ ಸಾಧಕರಿಗೆ ಸನ್ಮಾನ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪರಿಷತ್​ ಸದಸ್ಯರಾದ ಮಂಜಯ್ಯಗೌಡ, ಕೆಂಪರಾಜು, ಷಣ್ಮುಖಪ್ಪ, ರಾಮಣ್ಣ, ಪರಮೇಶ್ವರ ಸ್ವಾಮಿ, ಕಾಂತರಾಜು, ಮಂಜೇಶ್​ ಇದ್ದರು.