ಸುಳ್ಯ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ-ಸಾಹಿತ್ಯ ಸಂಭ್ರಮ ಕಾರ್ಯಕ್ರಮದ
ಸಮಾರೋಪ ಮತ್ತು ಸನ್ಮಾನ ಸಮಾರಂಭ ನಗರದ ಹಳೆಗೇಟಿನಲ್ಲಿ ನಡೆಯಿತು. ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಮಾತನಾಡಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಸಾಧಕರನ್ನು ಸನ್ಮಾನಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಧಾಕೃಷ್ಣ ಉಳಿಯತ್ತಡ್ಕ, ಸುಭಾಶ್ ಪಂಜ, ಬಾಲಕೃಷ್ಣ ನೆಟ್ಟಾರು, ರಚನಾ ಚಿದ್ಗಲ್ಲು ಹಾಗೂ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಗೋಕುಲ್‌ದಾಸ್ ಅವರನ್ನು ಸನ್ಮಾನಿಸಲಾಯಿತು. ಗಾಯಕರಾದ ವಿಜಯಕುಮಾರ್ ಮತ್ತು ಸಂಧ್ಯಾ ಮಂಡೆಕೋಲು, ಕಸಾಪ ಗೌರವ ಕಾರ್ಯದರ್ಶಿ ಚಂದ್ರಮತಿ ಬಾಲಚಂದ್ರ ಅವರನ್ನು ಗೌರವಿಸಲಾಯಿತು.
ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಬಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಕಸಾಪ ಗೌರವ ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು.
ಕಸಾಪ ಗೌರವ ಕಾರ್ಯದರ್ಶಿ ಚಂದ್ರಮತಿ ಸ್ವಾಗತಿಸಿದರು. ತೇಜಸ್ವಿ ಕಡಪಳ ವಂದಿಸಿದರು. ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.