ಕಾಸರಗೋಡು: ಭಾಷಾವಾರು ಪ್ರಾಂತ್ಯ ರಚನೆ ಬಳಿಕ ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಶಾಲೆಯೊಂದರಲ್ಲಿ ಕನ್ನಡ ಮಾಧ್ಯಮ ಆರಂಭವಾಗಿರುವುದು ಸ್ವರ್ಣಾಕ್ಷರಗಳಲ್ಲಿ ದಾಖಲಿಸಬೇಕಾದ ವಿಚಾರ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಶತಮಾನದ ಹೊಸ್ತಿಲಲ್ಲಿರುವ ಕಾರಡ್ಕದ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಗೆ ಭೇಟಿ ನೀಡಿ ಮಾತನಾಡಿದರು.
ಶಾಲೆಯ ವತಿಯಿಂದ ಬಿಳಿಮಲೆ ಅವರಿಗೆ ಗೌರವ ಸಲ್ಲಿಸಲಾಯಿತು. ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಕರ್ನಾಟಕ ಗಮಕ ಕಲಾ ಪರಿಷತ್ ಕೇರಳ ಘಟಕದ ಅಧ್ಯಕ್ಷ ಟಿ.ಶಂಕರನಾರಾಯಣ ಭಟ್, ಪಿಟಿಎ, ಎಸ್‌ಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಸಂಜೀವ ಎಂ. ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕ ಡಾ.ಶ್ರೀಶ ಕುಮಾರ ಪಂಜಿತ್ತಡ್ಕ ವಂದಿಸಿದರು.