ಜಿಲ್ಲೆ

ಕನ್ನಡ ರಾಜ್ಯೋತ್ಸವ ಆಚರಣೆ

ಅವಿನಾಶ್ ಜೈನಹಳ್ಳಿ

ಮೈಸೂರು: ಜೆಎಸ್‌ಎಸ್ ನರ್ಸಿಂಗ್ ಕಾಲೇಜು, ಜೆಎಸ್‌ಎಸ್ ವಾಕ್ ಮತ್ತು ಶ್ರವಣ ಸಂಸ್ಥೆ, ಜೆಎಸ್‌ಎಸ್ ಫಿಸಿಯೋಥೆರಫಿ ಸಹಯೋಗದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.


ಜೆಎಸ್‌ಎಸ್ ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಮೈಸೂರು ವಿವಿ ಸಂದರ್ಶಕ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ ಅವರು ಕನ್ನಡ ನಾಡು, ನುಡಿಯ ಮಹತ್ವ ತಿಳಿಸಿದರು. ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್.ಮಹೇಶ್, ಜೆಎಸ್‌ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಎಂ.ಕೆ.ಅಶ್ವತಿ ದೇವಿ ಇತರರಿದ್ದರು.