ಬೆಂಗಳೂರು: ಯಾವುದೇ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವವರು ನಾಡಿನ ಯಾವುದೇ ಮೂಲೆಯಲ್ಲಿದ್ದರೂ ಗುರುತಿಸುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.
ಕಸಾಪ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಪಾರದರ್ಶಕ ವ್ಯವಸ್ಥೆ ಜಾರಿಯಾಗಬೇಕು ಎನ್ನುವ ಕಾರಣಕ್ಕೆ ಇರುವ ಮಾಹಿತಿ ಹಕ್ಕು ಕಾಯ್ದೆಯನ್ನು ಕೆಲ ಮಾಹಿತಿ ಹಕ್ಕು ಕಾರ್ಯಕರ್ತರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಕಾನೂನು ಹರಿತವಾದ ಖಡ್ಗ ಇದ್ದಂತೆ. ಅದನ್ನು ಆತ್ಮರಣೆ ಮಾಡಿಕೊಳ್ಳಬಹುದು ಹಾಗೂ ಸಂಹಾರ ಮಾಡಲೂ ಬಳಸಬಹದು. ಅದಕ್ಕೆ ಪರಿಷತ್ತು ಈ ಕಾನೂನನ್ನು ನಿರಂತರವಾಗಿ ಜನಪರವಾಗಿ ಬಳಸುತ್ತಿರುವವರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ಉತ್ತರ ವಿವಿ ಕುಲಪತಿ ಡಾ. ನಿರಂಜನ ವಾನಳ್ಳಿ ಮಾತನಾಡಿ, ದೇಶ ಕಟ್ಟುವಲ್ಲಿ ನಾಯಕರ ಪಾತ್ರದ ಜತೆಗೆ ನೆಲ ಮೂಲ ಸಂಸತಿಯನ್ನು ಕಾಯುವ ಸಾಮಾನ್ಯ ಜನರ ಪಾತ್ರವೂ ಮುಖ್ಯವಾದುದು. ಆದರೆ ಸಾಮಾನ್ಯ ಜನರ ಕೊಡುಗೆಗಳು ದಾಖಲಾಗುವುದೇ ಇಲ್ಲ. ಸದ್ದಿಲ್ಲದೇ ಕನ್ನಡ ಕಟ್ಟುವ ಕೆಲಸ ಮಾಡುತ್ತಿರುವವರಿಗೆ ಗುರುತಿಸುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದರು.
ಪ್ರಶಸ್ತಿ ಪುರಸತರು:
ಹಿರಿಯ ಪತ್ರಕರ್ತ ಸುದರ್ಶನ ಚನ್ನಂಗಿಹಳ್ಳಿ (ನಾಗಡಿಕೆರೆ&ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ), ಲೇಖಕಿ ಎಚ್.ಜಿ. ಶೋಭಾ (ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ), ಡಾ. ವಿಜಯಮಾಲಾ ರಂಗನಾಥ್ ಮತ್ತು ಪತ್ರಕರ್ತ ಭೇರ್ಯ ರಾಮಕುಮಾರ್ (ಸತ್ಯವತಿ ವಿಜಯರಾವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ ಪ್ರಶಸ್ತಿ), ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗುಂಡಪ್ಪ ಗಡಾದ ಅವರಿಗೆ ಮಾಹಿತಿ ಹಕ್ಕು ತಜ್ಞ ಜೆ.ಎಂ. ರಾಜಶೇಖರ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂವಿಧಾನ, ಕಾಯ್ದೆ, ಕಾನೂನುಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತವರ ನಡುವೆ ಕನ್ನಡ ಸಾಹಿತ್ಯ ಪರಿಷತ್ತು ಪ್ರಾಮಾಣಿಕವಾಗಿ ಕನ್ನಡ ಕಟ್ಟಿ ಬೆಳೆಸುವ ಕೆಲಸ ಮಾಡುತ್ತಿದೆ. ಒಳ್ಳೆಯ ಕೆಲಸ ಮಾಡುವಾಗ ತಗಾದೆ ಎತ್ತುವವರಿರುತ್ತಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳದೆ ಆತ್ಮಸಾಗೆ ಗೌರವ ಕೊಟ್ಟು ನಮ್ಮ ಕರ್ತವ್ಯ ಮಾಡಬೇಕು.
-ಬಿ. ವೀರಪ್ಪ, ಹೈಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ