ಜಿಲ್ಲೆ

6ರಂದು ಕನ್ನಡ ಸಾಹಿತ್ಯ ಸಮ್ಮೇಳನ

ಇಂದಿರಾ ಎನ್ ಕೆ

ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕದ ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಯಕ್ಷ ಕಲಾರಂಗ ಅಧ್ಯಕ್ಷ ವಿಜಯ ಶೆಟ್ಟಿ ಬಿಡುಗಡೆಗೊಳಿಸಿದರು.

ಡಿ.6ರಂದು ಶಿರ್ಲಾಲು ನಾಲ್ಕೂರು ನರಸಿಂಗರಾಯ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ಬೆಳ್ಳಿಹಬ್ಬ ಸಂಭ್ರಮದಲ್ಲಿ ಸಮ್ಮೇಳನ ನಡೆಯಲಿದೆ. ಜಾನಪದ ವಿದ್ವಾಂಸ ಕೆ.ಗುಣಪಾಲ ಕಡಂಬ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉಡುಪಿ ಜಿಲ್ಲಾ ಪ್ರತಿನಿಧಿ ಎಸ್.ನಿತ್ಯಾನಂದ ಪೈ, ಶಿರ್ಲಾಲು ಪ್ರೌಢಶಾಲಾ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶೀತಲ್ ಕುಮಾರ್ ಜೈನ್, ಇರ್ವತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭರತ್ ಜೈನ್, ಶಿರ್ಲಾಲು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ ಕೆ.ಈಶ್ವರ ಮಂಗಲ, ಶಿರ್ಲಾಲು ಸರ್ಕಾರಿ ಪ್ರೌಢಶಾಲಾ ಬೆಳ್ಳಿಹಬ್ಬ ಸಮಿತಿ ಕಾರ್ಯದರ್ಶಿ ಸತೀಶ್ ವಡ್ಡರ್ಸೆ, ಕಾರ್ಕಳ ಕಸಾಪ ಘಟಕದ ಗೌರವ ಕಾರ್ಯದರ್ಶಿ ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಸದಸ್ಯರಾದ ಶಿವಸುಬ್ರಹ್ಮಣ್ಯ ಭಟ್, ತಿಪ್ಪೇಸ್ವಾಮಿ, ಸುಲೋಚನಾ ಬಿ.ವಿ, ಡಾ.ಸುಮತಿ ಪಿ., ಮಾಲತಿ ಜಿ.ಪೈ, ಶೈಲಜಾ ಹೆಗಡೆ ಆಳ್ವಾಸ್ ಉಪನ್ಯಾಸಕ ಅಂಬರೀಶ್ ಚಿಪ್ಲೂಣ್ಕರ್, ನರಸಿಂಹಮೂರ್ತಿ ಉಪಸ್ಥಿತರಿದ್ದರು. ಕಾರ್ಕಳ ತಾಲೂಕು ಘಟಕ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ದೇವದಾಸ ಕೆರೆಮನೆ ವಂದಿಸಿದರು.