ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತು(ಕಸಾಪ) ಇದವರೆಗೂ ಎರಡು ಸಾವಿರಕ್ಕೂ ಅಧಿಕ ಮಹತ್ವದ ಪ್ರಕಟಣೆಗಳನ್ನು ಪ್ರಕಟಿಸಿದ್ದು, ಅವನ್ನು ಜನ ಸಾಮಾನ್ಯರಿಗೆ ತಲುಪಿಸಲು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ ತಿಂಗಳಾದ್ಯಂತ ಪರಿಷತ್ತು ಪ್ರಕಟಣೆಗಳ ಮೇಲೆ ಶೇ. 10 ರಿಂದ 75 ರಿಯಾಯಿತಿ ಘೋಷಿಸಿದೆ.
ರಿಯಾಯಿತಿ ಹಿನ್ನೆಲೆಯಲ್ಲಿ ಪರಿಷತ್ತಿನ ಪುಸ್ತಕ ಮಾರಾಟ ವಿಭಾಗವು ಶನಿವಾರ, ಭಾನುವಾರ ಸೇರಿ ಎಲ್ಲಾ ದಿನಗಳಲ್ಲೂ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ತೆರೆದಿರುತ್ತದೆ. ಓದುಗರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.