ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ ಜುಲೈ 13ರಂದು ಸೀತಾಂಗೋಳಿಯಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸೋಮವಾರ ಬಿಡುಗಡೆಗೊಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೊಡು ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್ ಸುಬ್ಬಯ್ಯಕಟ್ಟೆ, ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ರವಿ ನಾಯ್ಕಪು, ಉಪಾಧ್ಯಕ್ಷ ಪುರುಷೋತ್ತಮ ಪೆರ್ಲ, ಕೆಯುಡಬ್ಲುೃಜೆ ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಗಂ, ಜೆಡ್.ಎ ಕಯ್ಯರ್, ಎ.ಶ್ರೀನಾಥ್, ವಕೀಲ ಥಾಮಸ್ ಡಿಸೋಜ, ಚನಿಯಪ್ಪ ನಾಯ್ಕ, ರಾಜೇಶ್ ಕುದ್ರೆಪ್ಪಾಡಿ ಉಪಸ್ಥಿತರಿದ್ದರು.
13ರಂದು ಬೆಳಗ್ಗೆ 9.30ಕ್ಕೆ ಸೀತಾಂಗೋಳಿ ಪೇಟೆಯಿಂದ ಶೋಭಾಯಾತ್ರೆ ಆರಂಭಗೊಳ್ಳಲಿದ್ದು, ಪುತ್ತಿಗೆ ಗ್ರಾಪಂ ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ ಚಾಲನೆ ನೀಡಲಿದ್ದಾರೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಿಲಿದ್ದಾರೆ. ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕೆಯುಡಬ್ಲುೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.