ಜಿಲ್ಲೆ

ಜು.2ರಂದು ನಗರದಲ್ಲಿ ವಿಚಾರ ಸಂಕಿರಣ: ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಹೇಳಿಕೆ

ಕೆ.ಎನ್.ರಾಘವೇಂದ್ರ

ಮಂಡ್ಯ: ನಗರದ ಗಾಂಧಿಭವನದಲ್ಲಿ ಜು.2ರಂದು ಐಎಎಸ್ ಮತ್ತು ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಹೇಳಿದರು.

ಕನ್ನಡ ಸೇನೆ ಸಂಘಟನೆ ಸಾಮಾಜಿಕ, ಶೈಕ್ಷಣಿಕ ಹಾಗೂ ನಾಡು, ನುಡಿಯ ಬಗ್ಗೆ ಹಲವು ವರ್ಷದಿಂದ ಹೋರಾಟ ನಡೆಸುತ್ತಿದೆ. ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಈ ನಿಟ್ಟಿನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಗ್ಗೆ 11ಗಂಟೆಗೆ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಲಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ಭೂಗೋಳಶಾಸ್ತ್ರ ಸ್ನಾತಕೋತರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಬಿ.ಎನ್.ಹೇಮಚಂದ್ರ ವಿಚಾರ ಮಂಡಿಸಲಿದ್ದಾರೆ. ಜಿಲ್ಲಾ ಎಸ್ಪಿ ಎನ್.ಯತೀಶ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಎಸ್‌ಬಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ, ಆದರ್ಶ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಎಲ್.ಮೂರ್ತಿ ಭಾಗವಹಿಸಲಿದ್ದಾರೆ ಎಂದರು.

ಸೇನೆಯ ಮಹಿಳಾಧ್ಯಕ್ಷೆ ಸೌಭಾಗ್ಯ, ರಾಜ್ಯ ಸಂಚಾಲಕಿ ದೇವಮ್ಮ, ಕಾರ್ಯಾಧ್ಯಕ್ಷ ಬೆಟ್ಟಳ್ಳಿ ಮಂಜು, ಕೇಬಲ್ ಮಂಜು ಉಪಸ್ಥಿತರಿದ್ದರು.