ಜಿಲ್ಲೆ

‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ರಿಲೀಸ್; ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ

Webdesk - Savina Naik
  • -7 ಭಾಷೆಯಲ್ಲಿ ಮೂಡಿ ಬರಲಿದೆ ಕಾಂತಾರ ಸಿನಿಮಾ

ಬೆಂಗಳೂರು: ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ತಗೆದುಕೊಂಡು ಹೋಗಿರುವ ಸಿನಿಮಾ ಸಾಲಿನಲ್ಲಿ ಕಾಂತಾರ ಸಿನಿಮಾ ಪಾತ್ರ ಮುಖ್ಯವಾಗಿದೆ. ಕಾಂತಾರ ಸಿನಿಮಾ ಸೂಪರ್ ಡೂಪರ್ ಹಿಟ್​ ಆಗಿತ್ತು.​ ‘ಕಾಂತಾರ ಚಾಪ್ಟರ್ 1’ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದರು. ಈ ಕುರಿತಾಗಿ ಚಿತ್ರತಂಡದಿಂದ ಇಂಟ್ರಸ್ಟಿಂಗ್​​ ಮಾಹಿತಿಯೊಂದು ಹೊರ ಬಿದ್ದಿದೆ.  ಕನ್ನಡದ  ಈ ಸಿನಿಮಾ ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ.

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲೀಸ್ ಆಗಿದೆ. ಹೊಂಬಾಳೆ ಫಿಲ್ಮಸ್​​ನಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೋಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ.

ಇಂದು (ನವೆಂಬರ್ 27) ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದಲ್ಲಿ ‘ಕಾಂತಾರ ಚಾಪ್ಟರ್ 1’  ಚಿತ್ರದ ಮುಹೂರ್ತ ನೆರವೇರಿಸುವುದರ ಜೊತೆಗೆ ಮೊದಲ ಪೋಸ್ಟರ್ ಅನಾವರಣ ಮಾಡಿದೆ. ಇದನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ.

ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮೂಡಿಬರುತ್ತಿದೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್​ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು.