ಜಿಲ್ಲೆ

ಕಾಂತಾರ ಪೋಸ್ಟರ್ ಮೇಲೆ ಆಶ್ಲೀಲ ಪದ ಬಳಕೆ

Shivamogga

ಶಿವಮೊಗ್ಗ: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ಅಶ್ಲೀಲ ಪದ ಬಳಕೆ ಮಾಡಿದ್ದು ವಿವಾದಕ್ಕೀಡು ಮಾಡಿದೆ. ಅದರ ಬೆನ್ನಲ್ಲೆ ಎಚ್ಚೆತ್ತುಕೊಂಡ ಪೊಲೀಸರು ಪೋಸ್ಟರ್ ತೆರವು ಮಾಡಿದ್ದಾರೆ.

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಕಳೆದೊಂದು ವಾರದಿಂದ ಪ್ರದರ್ಶನಗೊಳ್ಳುತ್ತಿದೆ. ಸಿನಿಮಾ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ. ಈ ನಡುವೆ ನಗರದ ಮಹಾವೀರ ವೃತ್ತದಲ್ಲಿ ಸಿನಿಮಾ ಪೋಸ್ಟರ್ ಮೇಲೆ ಕಿಡಿಗೇಡಿಗಳು ಅಶ್ಲೀಲ ಪದಗಳಿಂದ ಬರೆದಿದ್ದು ಹಿಂದು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರಿಂದ ಪೊಲೀಸರು ಪೋಸ್ಟರ್ ತೆಗೆಸಿದರು. ಕೊನೆಗೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯಿಂದ ಹಿಂದೆ ಸರಿದರು.