ಜಿಲ್ಲೆ

ಬಂಟರ ಸಂಘದ ಉಪಾಧ್ಯಕ್ಷೆ ಸ್ಥಾನಕ್ಕೆ ಕಾಂತಿ ಶೆಟ್ಟಿ ಸ್ಪರ್ಧೆ

ಬೆಂಗಳೂರು: ನಗರದ ಪ್ರತಿಷ್ಠಿತನ ಬಂಟರ ಸಂಘಕ್ಕೆ ಚುನಾವಣೆ ಘೋಷಣೆಯಾಗಿದ್ದು, ಜು.28ಕ್ಕೆ ಮತದಾನ ನಡೆಯಲಿದೆ. ಬಂಟರ ಸಂಘದ ಉಪಾಧ್ಯಕ್ಷೆ ಸ್ಥಾನಕ್ಕೆ ಕಾಂತಿ ಶೆಟ್ಟಿ ಸ್ಪರ್ಧೆ ಮಾಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಉದ್ಯಮಿಯಾಗಿರುವ ಕಾಂತಿ ಶೆಟ್ಟಿ ರವರು ಈಗಾಗಲೇ ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಪ್ರಸಿದ್ಧರಾಗಿದ್ದು, ಬಂಟರ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯಾಗಿರುವ ‘ಬೆಂಗಳೂರು ಬಂಟರ ಸಂಘ’ದ ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.