ಮಂಡ್ಯ: ಸಾರ್ವಜನಿಕರಿಗೆ ವಿವಿಧ ಇಲಾಖೆ ಸೌಲಭ್ಯಗಳು ಸುಲಭವಾಗಿ ದೊರೆಯುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ ತಿಳಿಸಿದರು.
ತಾಲೂಕಿನ ಮುದ್ದುಂಗೆರೆ ಗ್ರಾಮದ ಮುತ್ತುರಾಯಸ್ವಾಮಿ ಸಮುದಾಯ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸುಲಭವಾಗಿ ಸೇವೆ ಒದಗಿಸುವ ಕೆಲಸ ಮಾಡಬೇಕು. ಈ ಮೂಲಕ ವಾಹಿತಿ ಕೊರತೆಯಿಂದಾಗಿ ಸಾರ್ವಜನಿಕರು ಪದೇ ಪದೆ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅನೇಕ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರದ ಉದ್ದೇಶಗಳನ್ನು ಜನಸಾವಾನ್ಯರಿಗೆ ತಿಳಿಸುವಂತಹ ಕಾರ್ಯಕ್ರಮಗಳಾಗಿವೆ. ನ್ಯಾಯಾಧೀಶರು ಅವರ ಕೆಲಸದ ಜತೆಗೆ ಈ ರೀತಿಯ ಕಾರ್ಯಕ್ರಮಗಳನ್ನು ವಾಡುವಂತಹದ್ದು ಕಠಿಣವಾದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಿ ಸದಸ್ಯ ಕಾರ್ಯದರ್ಶಿಗಳನ್ನು ನೇಮಕ ವಾಡಲಾಗಿದೆ ಎಂದರು.
ಕರ್ತವ್ಯದ ಜತೆಗೆ ಕಾನೂನು ಸೇವೆಗಳ ಪ್ರಾಧಿಕಾರದ ಚಟುವಟಿಕೆಯಲ್ಲೂ ಸಹ ಭಾಗವಹಿಸುತ್ತೇವೆ. ಪ್ರಾಧಿಕಾರದ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದಲೂ ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸುವಂತಹ ಅರಿವು ಕಾರ್ಯಕ್ರಮ ಹಾಗೂ ಸವಲತ್ತುಗಳನ್ನು ಒದಗಿಸಿ ಕೊಡುವಂತಹ ಕೆಲಸವನ್ನು ವಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜನಸಾವಾನ್ಯರು ಚಿಕಿತ್ಸೆಗಾಗಿ ಲಕ್ಷಾಂತರ ರೂ. ಕಟ್ಟಬೇಕಾಗಿತ್ತು. ಆದರೆ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ಚಿಕಿತ್ಸೆಯನ್ನು ನೀಡುವಂತಾಯಿತು. ಜನರಿಗೆ ಇಂತಹ ಕಾರ್ಯಕ್ರಮಗಳ ಬಗ್ಗೆ ವಾಹಿತಿ ಅವಶ್ಯಕ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನಿಕುವಾರಿ, ಕೃಷಿಕ್ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು, ಪ್ರೊ.ಕೆಂಪಮ್ಮ, ಶಿವರಾಜು, ಡೇವಿಡ್ ಇತರರಿದ್ದರು.