ಜಿಲ್ಲೆ

ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ ಡಾ.ಕನ್ಯಾನ ಸದಾಶಿವ ಶೆಟ್ಟಿ ಅವರಿಂದ 3 ಕೋಟಿ ರೂ. ದೇಣಿಗೆ

Mangaluru - Hariprasad Rai



ಮಂಗಳೂರು :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕಾರ್ಯವೈಖರಿಯನ್ನು ಮೆಚ್ಚಿ ಫೌಂಡೇಶನ್‌ನ ಗೌರವಾಧ್ಯಕ್ಷ
ಡಾ.ಕನ್ಯಾನ ಸದಾಶಿವ ಶೆಟ್ಟಿ ಅವರು 3 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ.
ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಸಮಾಲೋಚನಾ ಸಭೆಯಲ್ಲಿ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ
ಡಾ.ಕೆ. ಪ್ರಕಾಶ್ ಶೆಟ್ಟಿ ಮತ್ತು ಅಧ್ಯಕ್ಷರಾಗಿ ಬರೋಡ ಶಶಿಧರ ಶೆಟ್ಟಿ ಜವಾಬ್ದಾರಿ ವಹಿಸಿಕೊಂಡಿದ್ದರು. ದಶಮಾನೋತ್ಸವದ ಮುಖ್ಯ
ಧ್ಯೇಯವಾಗಿ ಕನಿಷ್ಠ 10 ಕೋಟಿ ರೂ. ಈ ವರ್ಷ ದೇಣಿಗೆ ಸಂಗ್ರಹ ಆಗಬೇಕೆಂದು ದಾನಿಗಳಲ್ಲಿ ಮನವಿ ಮಾಡಿಕೊಂಡರು.
ಮನವಿಗೆ ಸ್ಪಂದಿಸಿದ ಮಹಾದಾನಿ ಡಾ. ಕೆ. ಸದಾಶಿವ ಶೆಟ್ಟಿ ಅವರು ಫೌಂಡೇಶನ್‌ಗೆ 3 ಕೋಟಿ ರೂ.ದೇಣಿಗೆ ಪ್ರಕಟಿಸಿದ್ದಾರೆ.
2020 ರಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷರಾದ ಕನ್ಯಾನ ಸದಾಶಿವ ಶೆಟ್ಟಿಯವರು ನೀಡಿದ ಕೊಡುಗೆ ಅಪಾರ.
ವಿಶಾಲ ಹೃದಯ ಶ್ರೀಮಂತಿಕೆಯನ್ನು ತೋರಿಸಿದ ಹೆಮ್ಮೆಯ ಮಹಾದಾನಿಗಳಿಗೆ ಕೃತಜ್ಞತೆ ಅರ್ಪಿಸುತ್ತೇವೆ ಎಂದು ಗೌರವಾಧ್ಯಕ್ಷ
ಡಾ.ಕೆ. ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿ ಹಾಗೂ ಯಕ್ಷಧ್ರುವ ಪಟ್ಲ ಸಂಭ್ರಮ ದಶಮಾನೋತ್ಸವ ಸಮಿತಿ ಮತ್ತು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.