ಜಿಲ್ಲೆ

ಕಪ್ಪತಗುಡ್ಡ ಪ್ರಕೃತಿ ಶಿಬಿರದ ಶಿಲಾನ್ಯಾಸ ನೆರವೇರಿಸಿದ ಸಚಿವ ಎಚ್. ಕೆ. ಪಾಟೀಲ

ಗದಗ: ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಅರಣ್ಯ ವಸತಿ ಹಾಗೂ ವಿಹಾರ ದಾಮಗಳ ಸಂಸ್ಥೆ ಸಹಯೋಗದಲ್ಲಿ ಸೊರಟೂರು ಅರಣ್ಯ ಪ್ರದೇಶದಲ್ಲಿ ರವಿವಾರ ಕಪ್ಪತಗುಡ್ಡ ಪ್ರಕೃತಿ ಶಿಬಿರದ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು.

ಕಪ್ಪತಗುಡ್ಡ ಪ್ರಕೃತಿ ಶಿಬಿರದ ಶಿಲಾನ್ಯಾಸವನ್ನು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಜಿಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಮುಖಂಡರಾದ ಸುಜಾತಾ ದೊಡ್ಡಮನಿ, ಗುರಣ್ಣ ಬಳಗಾನೂರ, ಪ್ರಭು ಬುರಬುರೆ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಸೇರಿ ಸ್ಥಳೀಯ ಮುಖಂಡರು, ನಾಗರಿಕರು ಇದ್ದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಮನೋಜ ಕುಮಾರ ಹಾಜರಿದ್ದರು.