ಜಿಲ್ಲೆ

ಮಳೆಯ ಹೊಡೆತಕ್ಕೆ ರಸ್ತೆಗಳು ಕೆಸರು ಮಯ

ಪ್ರವೀಣ ಉದುಸಾ ದಲಬಂಜನ್

ಕಾರಟಗಿ: ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳ ರಸ್ತೆಗಳು ಕೆಸರು ಮಯವಾಗಿವೆ.

ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆ ಸುರಿಯುತ್ತಿದೆ. ಜಿಟಿಜಿಟಿ ಮಳೆಯಿಂದಾಗಿ ರಸ್ತೆಗಳಲ್ಲಿ ಮಳೆ ನೀರು ನಿಲ್ಲುತ್ತಿದೆ. ಹಳ್ಳಿ ಭಾಗದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಸಿದ್ದಾಪುರ, ಯರಡೋಣ, ಉಳೇನೂರು, ಬೆನ್ನೂರು, ಬರಗೂರು, ಗುಂಡೂರು, ಕಾರಟಗಿ ಸೇರಿ ಇತರೆಡೆ ಜಿಟಿಜಿಟಿ ಮಳೆ ಜನರನ್ನು ಕಾಡುತ್ತಿದೆ. ಹಳ್ಳಿಗಳಲ್ಲಿನ ರಸ್ತೆಗಳ ಗುಂಡಿಗಳಲ್ಲಿ ನೀರು ಸಂಗ್ರಹವಾಗುವುದರಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ. ಕೆಲ ಪ್ರದೇಶಗಳಲ್ಲಿ ಮಳೆ ನೀರು ಹೆಚ್ಚು ಸಂಗ್ರಹವಾಗುವ ನಿಂತಲ್ಲಿ ನೀರು ನಿಲ್ಲುವುದರಿಂದ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ಹಳ್ಳಿಗಳಲ್ಲಿ ಗುಂಡಿಗಳನ್ನು ಮುಚ್ಚಲು ತಾತ್ಕಾಲಿಕವಾಗಿ ಗ್ರಾಪಂ ಮುತುವರ್ಜಿ ವಜಿಸಬೇಕು. ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.