ಗುರುಪುರ: ನಮ್ಮ ಆತ್ಮರಕ್ಷಣೆಗೆ ಕರಾಟೆಯ ಅಭ್ಯಾಸ ಅವಶ್ಯಕ. ವಿದ್ಯಾರ್ಥಿಗಳು ಕರಾಟೆ ಕರಗತ ವಾಡಿಕೊಂಡು ದೇಹದ ಆರೋಗ್ಯ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ದೇಹ ರಕ್ಷಣೆ ಜತೆಗೆ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು. ಧೈರ್ಯದಿಂದ ಬದುಕನ್ನು ನಡೆಸಲು ಮತ್ತು ಕಷ್ಟದ ಪರಿಸ್ಥಿತಿಯಲ್ಲಿ ಎದೆಗುಂದದೆ ಜೀವನ ನಿರ್ವಹಿಸಲು ಕರಾಟೆ ಅಭ್ಯಾಸ ನಮ್ಮ ಜೀವನಕ್ಕೆ ಅವಶ್ಯಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಅಭಿಪ್ರಾಯಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ ವಲಯ, ವಾಮಂಜೂರು ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆ ಉದ್ಘಾಟಿಸಿ ಅವರು ವಾತನಾಡಿದರು.
ಶಾಲಾ ಕಾರ್ಯದರ್ಶಿ ಪ್ರೊ.ಎ.ರಾಜೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ದೈಹಿಕ ಶಿಕ್ಷಣಾಧಿಕಾರಿ ಲಿಲ್ಲಿ ಪಾಯ್ಸ ಶುಭಸಂಶನೆಗೈದರು. ನೀರುವಾರ್ಗ ವ್ಯವಸಾಯ ಸೇವಾ ಸಹಕಾರಿ ಸಂದ ಉಪಾಧ್ಯಕ್ಷ ಉದಯ ಕುವಾರ್ ಕುಡುಪು, ಜಿಲ್ಲಾ ಕರಾಟೆ ಅಸೋಸಿಯೇಶನ್‌ನ ಮೋರ್ಗನ್ ಮತ್ತು ಚಂದ್ರಶೇಖರ್, ಶಾಲಾ ಆಡಳಿತಾಧಿಕಾರಿ ನರೇಶ್ ಮಲ್ಲಿಗೆವಾಡು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಮತ್ತು ವಿಠಲ ವಾಗ್ಮೊರೆ ಮತ್ತಿತರರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕ ರಮೇಶ್ ಆಚಾರ್ಯ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಪ್ರಸ್ತಾವಿಸಿದರು. ಶಿಕ್ಷಕಿ ರವ್ಯಾ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂದ ಅಧ್ಯಕ್ಷ ಶೇಖರ ಕಡ್ತಲ ವಂದಿಸಿದರು.
ಸ್ಪರ್ಧೆಯಲ್ಲಿ ಜಿಲ್ಲೆಯ ಏಳು ತಾಲೂಕಿನಿಂದ ಪ್ರಥಮ ಸ್ಥಾನ ಗಳಿಸಿದ 320 ಸ್ಪರ್ಧಾಳುಗಳು ಭಾಗವಹಿಸಿದ್ದು, 4 ವಿಭಾಗಗಳಲ್ಲಿ ಒಟ್ಟು 44 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.