ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಂಧನ ಖಂಡಿಸಿ ಸ್ಥಳೀಯ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಕಿರಣ್‌ಕುಮಾರ್, ಖಲಂದರ್, ಸುರೇಶ್, ರಮೇಶ್, ಮಂಜುನಾಥ್, ದಿಲೀಪ್ ಇತರರಿದ್ದರು. 
ಜಿಲ್ಲೆ

ಕರವೇ ಕಾರ್ಯಕರ್ತರಿಂದ ರಸ್ತೆ ಸಂಚಾರ ತಡೆ

ನಾಗೇಶ ಎಸ್

ಅರಸೀಕೆರೆ: ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಂಧನ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಸ್ಥಳೀಯ ಘಟಕದ ಪದಾಧಿಕಾರಿಗಳು ಗುರುವಾರ ಮಧ್ಯಾಹ್ನ ಕೆಲಕಾಲ ದಿಢೀರ್ ರಸ್ತೆ ಸಂಚಾರ ತಡೆ ನಡೆಸಿ ಆಕ್ರೋಶ ಹೊರಹಾಕಿದರು.

ದಿಢೀರ್ ಪ್ರತಿಭಟನೆಯಿಂದ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ನಗರಾಧ್ಯಕ್ಷ ಕಿರಣ್‌ಕುಮಾರ್ ಮಾತನಾಡಿ, ನಾಡು, ನುಡಿಯ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ. ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕೆನ್ನುವ ಕುರಿತು ನಡೆಸಿದ ಪ್ರತಿಭಟನೆಯಲ್ಲಿ ಟಿ.ಎ.ನಾರಾಯಣಗೌಡ ಸೇರಿದಂತೆ ಹಲವು ಮುಖಂಡರನ್ನು ಬಂಧಿಸಿ ದೂರು ದಾಖಲಿಸಲಾಗಿದೆ. ತಕ್ಷಣವೇ ಎಲ್ಲರನ್ನೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಯತೀಶ್, ಖಲಂದರ್, ಸುರೇಶ್, ರಮೇಶ್, ಮಂಜುನಾಥ್, ದಿಲೀಪ್ ಇತರರು ಇದ್ದರು.