ಕೊಳ್ಳೇಗಾಲದಲ್ಲಿ ತಮಿಳು ನಟ ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಕರವೇ ಪದಾಧಿಕಾರಿಗಳು ಪೋಸ್ಟರ್ ಸುಟ್ಟು ಆಕ್ರೋಶ ಹೊರಹಾಕಿದರು. 
ಜಿಲ್ಲೆ

ಕೊಳ್ಳೇಗಾಲದಲ್ಲಿ ಕರವೇ ಪ್ರತಿಭಟನೆ

ಮಾದೇಶ್ ತಿ.ನರಸೀಪುರ

ಕೊಳ್ಳೇಗಾಲ: ತಮಿಳು ಭಾಷೆಯಿಂದ ಕನ್ನಡ ಹುಟ್ಟಿತು ಎಂದು ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ವಿರುದ್ಧ ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಗುರುಕಾರ್ ವೃತ್ತದ ಬಳಿ ಕಮಲ್ ಹಾಸನ್ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆ ನಡೆಸಿ, ಕಮಲ್ ಹಾಸನ್ ಭಾವಚಿತ್ರದ ಪೋಸ್ಟರ್‌ಗೆ ಬೆಂಕಿ ಹಾಕಿ ಆಕ್ರೋಶ ಹೊರಹಾಕಿದರು. ಬಳಿಕ ತಾಲೂಕು ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಮಹೇಶ್ ಅವರಿಗೆ ಮನವಿ ಸಲ್ಲಿಸಿದರು.

ಕರವೇ ವೇದಿಕೆ ತಾಲೂಕು ಅಧ್ಯಕ್ಷ ಅಯಾಜ್ ಕನ್ನಡಿಗ ಮಾತನಾಡಿ, ನಟ ಕಮಲ್ ಹಾಸನ್ ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಇನ್ಮುಂದೆ ಯಾರೇ ಆದರೂ ಕನ್ನಡದ ಬಗ್ಗೆ ಮಾತನಾಡಬೇಕಾದರೆ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದರು.

ಕರವೇ( ನಾರಾಯಣ ಗೌಡ ಬಣ) ಗೌರವಾಧ್ಯಕ್ಷ ಇದ್ರೀಶ್ ಪಾಷ, ಲಿಂಗರಾಜು, ಉಪಾಧ್ಯಕ್ಷ ಅಬ್ಜಲ್, ಮೂರ್ತಿ ಶಾಸ್ತ್ರೀ, ಕುಮಾರ್, ಕಾರ್ಯದರ್ಶಿ ಮೊಹಮ್ಮದ್ ಸಮೀರ್, ಮೊಯಿನುದ್ದೀನ್, ಮಹಿಳಾ ಸಂಘದ ಅಧ್ಯಕ್ಷೆ ರಾಜೇಶ್ವರಿ, ಅಶ್ವಿನಿ, ಕವಿತಾ ಇತರರು ಇದ್ದರು.