ನಿವೃತ್ತ ಸೈನಿಕರಾದ ವಿನೋದ್ ಕೋಟ್ಯಾನ್ ಮೂಳೂರು, ರಾಜೇಶ್ ಪಾಟ್ಕರ್ ಪಂಜಿಮಾರ್ ಅವರನ್ನು ಸನ್ಮಾನಿಸಲಾಯಿತು 
ಜಿಲ್ಲೆ

ಬಿಜೆಪಿಯಿಂದ ನಿವೃತ್ತ ಯೋಧರಿಗೆ ಸನ್ಮಾನ : ಕಾಪುವಿನಲ್ಲಿ ಕಾರ್ಗಿಲ್ ವಿಜಯ ದಿನ

ಇಂದಿರಾ ಎನ್ ಕೆ

ಪಡುಬಿದ್ರಿ: ಕಾರ್ಗಿಲ್ ವಿಜಯ ದಿನ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ನಡೆದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ವಿನೋದ್ ಕೋಟ್ಯಾನ್ ಮೂಳೂರು ಹಾಗೂ ರಾಜೇಶ್ ಪಾಟ್ಕರ್ ಪಂಜಿಮಾರ್ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕೇಂದ್ರಿಯ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.