ಜಿಲ್ಲೆ

ಕಾರಿನಲ್ಲಿ ಸುಟ್ಟು ಕರಕಲಾದ ಇಂಜಿನಿಯರ್, ಕೌಟುಂಬಿಕ ಕಲಹಕ್ಕೆ ಕೊಲೆ ಶಂಕೆಹೆಗ್ಗನಹಳ್ಳಿಯಲ್ಲಿ ಪ್ರಕರಣ

Bengaluru Rural

ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
ವಿಶ್ವನಾಥಪುರ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿ ನಿರ್ಜನ ಪ್ರದೇಶದಲ್ಲಿ ಕಾರು ಸಮೇತ ಯುವಕನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.


ಯಲಹಂಕ ಉಪನಗರ 4 ನೇ ಹಂತದ ನಿವಾಸಿ ಆರ್ೀ ಪಾಷಾ (34) ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ ನಿರ್ಜನ ಪ್ರದೇಶದಲ್ಲಿ ಕಾರು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರು ಮೃತವ್ಯಕ್ತಿ ಯಲಹಂಕ ನಿವಾಸಿಯಾಗಿದ್ದು ಸ್‌ಟಾವೇರ್ ಉದ್ಯೋಗಿ ಎಂಬುದನ್ನು ಪತ್ತೆಹಚ್ಚಿದ್ದಾರೆ.


ಅಕ್ರಮ ಸಂಬಂಧದ ಕೊಲೆ!: ಬೆಂಗಳೂರಿನ ಕಂಪನಿಯೊಂದರಲ್ಲಿ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಆರ್ೀ ಹಾಗೂ ಪತ್ನಿ ನಡುವೆ ಕೆಲದಿನಗಳಿಂದ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದು ಕೆಲವು ದಿನಗಳಿಂದ ಪತ್ನಿ ತವರು ಮನೆ ಸೇರಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಆರ್ೀ ಕೊಲೆಯಾಗಿರಬಹುದು ಎಂದು ಕುಟುಂಬದವರು ಶಂಕಿಸಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.