ಬಂಟ್ವಾಳ: ಕಾರಿಂಜ ಯಕ್ಷಾವಾಸ್ಯಮ್‌ನ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ.ನ ವಗ್ಗ , ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಭಾನುವಾರ ನಡೆಯಿತು.
ಮಧ್ಯಾಹ್ನ ಪಚ್ಚಾಜೆಗುತ್ತು ಜಿನರಾಜ ಆರಿಗ ಕಾರ್ಯಕ್ರಮ ಉದ್ಘಾಟಿಸಿದರು. ಸಂಜೆ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲ ಬಿ.ಉದಯ ಕುವಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ವತಿಯಿಂದ ಕೊಡವಾಡುವ ಯಕ್ಷವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಮದ್ದಳೆಗಾರ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಪ್ರದಾನ ವಾಡಲಾಯಿತು. ಯಕ್ಷಗಾನ ಹಿಮ್ಮೇಳ ವಾದಕ ಚಂದ್ರಶೇಖರ ಭಟ್ ಕೊಂಕಣಾಜೆ ಅಭಿನಂದನಾ ನುಡಿಗಳನ್ನಾಡಿದರು. ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸುಭಿಕ್ಷಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ವಾಜಿ ಸಚಿವ ಬಿ.ರವಾನಾಥ ರೈ, ಜಿ.ಪಂ.ವಾಜಿ ಸದಸ್ಯ ಬಿ.ಪದ್ಮಶೇಖರ ಜೈನ್ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನಾ ಸಮಿತಿ ವಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಮಡಂತ್ಯಾರು ಜೆಸಿಐ ನಿಕಟಪೂರ್ವ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಶ್ರುತಾಂಜನ್ ಜೈನ್ ಅಲಂಪುರಿ ಗುತ್ತು, ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರ ಗೌರವಾಧ್ಯಕ್ಷ ಪ್ರಮೋದ್ ಕುವಾರ್ ರೈ, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ ಮತ್ತಿತರರಿದ್ದರು.
ಜಯರಾಮ ಭಟ್ ಸ್ವಾಗತಿಸಿದರು. ದೇವದಾಸ ಶೆಟ್ಟಿ ಬಂಟ್ವಾಳ ಅಭಿನಂದನಾ ಪತ್ರ ವಾಚಿಸಿದರು. ಸಂಚಾಲಕಿ ಸಾಯಿಸುವಾ ಎಂ.ನಾವಡ ಕಾರಿಂಜ ವಂದಿಸಿದರು. ರತ್ನದೇವ್ ಪುಂಜಾಲಕಟ್ಟೆ ನಿರೂಪಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ, ಭಾಗವತಿಕೆ, ಯಕ್ಷಗಾನ, ಬಳಿಕ ಮಹಿಳಾ ಕಲಾವಿದರಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಪೂರ್ಣಿವಾ ಯತೀಶ್ ರೈ ನಿರ್ದೇಶನದ ಯಕ್ಷಗಾನ ವೀರಮಣಿ ಕಾಳಗ ಪ್ರದರ್ಶನ ನಡೆಯಿತು.