ಕೋಟ ಮಣೂರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಉದ್ಘಾಟಿಸಿದರು 
ಜಿಲ್ಲೆ

ಕಾರ್ಕಡ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ

ಇಂದಿರಾ ಎನ್ ಕೆ

ಕೋಟ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಹಾಗೂ ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆ ಸಹಭಾಗಿತ್ವದಲ್ಲಿ ಕಾರ್ಕಡ ಕ್ಲಸ್ಟರ್ ಮಟ್ಟದ 2024-25ನೇ ಸಾಲಿನ ಪ್ರತಿಭಾ ಕಾರಂಜಿ ಶುಕ್ರವಾರ ಶಾಲಾ ಸಭಾಂಗಣದಲ್ಲಿ ಜರುಗಿತು.

ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ನಾಗರಾಜ್ ಭಟ್, ಪಡುಕರೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ವಾಹಿನಿ ಯುವಕ ಮಂಡಲ ಅಧ್ಯಕ್ಷ ರಮೇಶ್ ಎಚ್.ಕುಂದರ್, ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ ಶೆಟ್ಟಿ, ಪ್ರಾಥಮಿಕ ವಿಭಾಗ ಅಧ್ಯಕ್ಷ ನಾಗರಾಜ್, ಬ್ರಹ್ಮಾವರ ವಲಯ ಸಂಪನ್ಮೂಲ ವ್ಯಕ್ತಿ ಸುರೇಶ್ ಕುಂದರ್ ಉಪಸ್ಥಿತರಿದ್ದರು.

ಮಣೂರು ಫ್ರೌಢಶಾಲಾ ಮುಖ್ಯ ಶಿಕ್ಷಕ ರಾಮದಾಸ ನಾಯಕ್ ಸ್ವಾಗತಿಸಿ, ಕ್ಲಸ್ಟರ್ ಮಟ್ಟದ ಸಂಯೋಜಕರಾದ ಸವಿತಾ ಆಚಾರ್ ಪ್ರಾಸ್ತಾವನೆ ಸಲ್ಲಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ ವಂದಿಸಿದರು. ಶಿಕ್ಷಕ ರಾಜೀವ ಕಾರ್ಯಕ್ರಮ ನಿರೂಪಿಸಿದರು.