ಮೂಲ್ಕಿ: ದೇವರ ಮೇಲೆ ವಿಶ್ವಾಸ ಧರ್ಮದ ಮೇಲೆ ನಂಬಿಕೆ ಇದ್ದರೆ ಪ್ರಾದೇಶಿಕ ಅಭಿವೃದ್ಧಿಯ ಜತೆಗೆ ಜೀವನದಲ್ಲಿ ಸಾಧಕಾಗಲು ಸಾಧ್ಯ ಎಂದು ನಿಟ್ಟೆ ಪರಿಗಣಿತ ವಿವಿ ಕುಲಾಧಿಪತಿ ಎನ್.ವಿನಯ ಹೆಗ್ಡೆ ಹೇಳಿದರು.
ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಟೀಲು ಕ್ಷೇತ್ರದ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಆಶೀರ್ವಚನ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್, ದ.ಕ.ನಿಕಟಪೂರ್ವ ಸಂಸದ, ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಆದಿತ್ಯ ಪೂಂಜ, ಕೃಷ್ಣ ಶೆಟ್ಟಿ ಅಗ್ಗೊಟ್ಟು, ಮೂಲ್ಕಿ ನಪಂ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಯೋಗೀಶ್ ಕೋಟ್ಯಾನ್, ಹರ್ಷರಾಜ ಶೆಟ್ಟಿ ಜಿ.ಎಂ., ರಾಧಿಕಾ ಕೋಟ್ಯಾನ್, ಉದ್ಯಮಿ ಧನಂಜಯ ಶೆಟ್ಟಿ ಮುಂಬೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ, ಉದ್ಯಮಿ ಶರತ್ ಸಾಲ್ಯಾನ್ ಬೆಂಗಳೂರು, ವ್ಯವಸ್ಥಾಪನಾ ಸಮಿತಿಯ ರವಿಕುಮಾರ್ ಭಟ್, ರಾಘವೇಂದ್ರ ಟಿ.ರಾವ್, ಶಶೀಂದ್ರ ಎಂ.ಸಾಲ್ಯಾನ್, ನೂತನ್ ಕೆ.ಶೆಟ್ಟಿ, ಸುಧಾಮ ಫೌಂಡೇಷನ್ ಅಧ್ಯಕ್ಷ ಸುನಿಲ್ ಆಳ್ವ, ಹರಿಹರ ಕ್ಷೇತ್ರ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾ ಶೇಖರ್, ಸಮಿತಿ ಕಾರ್ಯದರ್ಶಿಗಳಾದ ವೈ.ಎನ್.ಸಾಲ್ಯಾನ್, ಪ್ರವೀಣ್ ಕೋಟ್ಯಾನ್ ಉಪಸ್ಥಿತರಿದ್ದರು.
ಸುದರ್ಶನ್ ಭಟ್ ಪ್ರಾರ್ಥಿಸಿದರು. ದೇವಳದ ಆಡಳಿತ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜ ಸ್ವಾಗತಿಸಿದರು. ಸಮಿತಿ ಕಾರ್ಯದರ್ಶಿ ವೈ.ಎನ್.ಸಾಲ್ಯಾನ್ ಪ್ರಸ್ತಾವನೆಗೈದರು. ಹೊರೆಕಾಣಿಕೆ ಸಮಿತಿಯ ಸಂಚಾಲಕ ಸುನೀಲ್ ಆಳ್ವ ವಂದಿಸಿದರು. ಡಾ.ಕಿಶೋರ್ ಕುಮಾರ್ ರೈ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.