ಜಿಲ್ಲೆ

Murugha Mutt Case: ಚಿತ್ರದುರ್ಗದ ಕಾರಾಗೃಹದಿಂದ ಮುರುಘಾ ಶರಣರು ಬಿಡುಗಡೆ

Webdesk - Ashwini HR

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿತ್ತು. ಈ ಜಾಮೀನಿನ ಬಳಿಕ, ಇಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು 2ನೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದು, ಮುರುಘಾ ಶರಣರು ಜೈಲಿನಿಂದ ಬಿಡುಗಡೆಗೆ ಆದೇಶ ಮಾಡಿದೆ.

ಆದರೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶ ಮಾಡುವಂತಿಲ್ಲ ಸೇರಿದಂತೆ ಹಲವು ಷರತ್ತುಗಳನ್ನು ಹೈಕೋರ್ಟ್ ಹಾಕಿದೆ. ಜೈಲಿನಿಂದ ಹೊರಬಂದ ಮುರುಘಾಶ್ರೀ ನೇರವಾಗಿ ದಾವಣಗೆರೆಗೆ ತೆರಳಿದ್ದು, ಭಕ್ತರು ಸ್ವಾಗತಿಸಿದ್ದಾರೆ.

ಅತ್ಯಾಚಾರ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳು ಜೈಲುಪಾಲಾಗಿದ್ದರು. ಅವರ ವಿರುದ್ಧ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸೆಷನ್ಸ್ ಕೋರ್ಟ್ ನ ವಿಚಾರಣೆಗೆ ವೀಡಿಯೋ ಕಾನ್ಫೆರೆಸ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು. ಜೊತೆಗೆ ಅವರ ಬಿಡುಗಡೆಗೆ ಸಂಬಂಧಿಸಿದಂತ ಪ್ರಕರಣವನ್ನು ವಿಚಾರಣೆ ನಡೆಸಲಾಯಿತು.

ಇಂದು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ಹೈಕೋರ್ಟ್ ನೀಡಿದ ಜಾಮೀನು ಪ್ರತಿಯನ್ನು ಪರಿಶೀಲಿಸಿದ ನಂತರ ಚಿತ್ರದುರ್ಗದ ಕಾರಾಗೃಹದಿಂದ ಮುರುಘಾ ಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಹೀಗಾಗಿ ಚಿತ್ರದುರ್ಗದ ಮುರುಘಾ ಶರಣರು ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.