ಮೈಸೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಂಡಿರುವ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ) ಶೈಕ್ಷಣಿಕ ಸಾಲ ಯೋಜನೆಗಳು, ಮರಾಠಿ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kmcdc.Karnataka.govt.in ಅಥವಾ ದೂರವಾಣಿ ಸಂಖ್ಯೆ:- 0821-2341194 ಅನ್ನು ಸಂಪರ್ಕಿಸಬಹುದೆAದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಮಗದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.