ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ತಹಸೀಲ್ದಾರ್ ಎಂ.ರೇಣುಕಾ, ತಾಪಂ ಇಒ ಕೆ.ನರಸಪ್ಪ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಉಪಾಧ್ಯಕ್ಷೆ ಲೀಲಾವತಿ ಪ್ರಭಾಕರ, ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಕರವೇ ಅಧ್ಯಕ್ಷ ಕಾಟೇರ ಹಾಲೇಶ್, ಕಸಾಪ ತಾಲೂಕು ಅಧ್ಯಕ್ಷ ವೀರೇಶ್ ಅಂಗಡಿ ಇತರರಿದ್ದರು. 
ಜಿಲ್ಲೆ

ಕರ್ನಾಟಕ ಸಮೃದ್ಧವಾದ ರಾಜ್ಯ

Kopala - Desk - Eraveni

ಕೂಡ್ಲಿಗಿ: ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ಎಲ್ಲರ ಕರ್ತವ್ಯ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದ ಚಂದ್ರಶೇಖರ್ ಆಜಾದ್ ರಂಗಮಂದಿರದಲ್ಲಿ ಶುಕ್ರವಾರ ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ತು, ಕರವೇ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಂಧದ ನಾಡಿನಲ್ಲಿ ಸಾಧು, ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡಿಗೆ ಒಂದು ಧೀಮಂತ ಶಕ್ತಿ ಇದೆ. ಈ ಸುಂದರ, ಸಮೃದ್ಧ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ 1ರಂದು ಸಡಗರ-ಸಂಭ್ರಮದಿಂದ ಎಲ್ಲ ಜಾತಿ ಮತ ಧರ್ಮಗಳ ಜನರು ಒಗ್ಗೂಡಿ ರಾಜ್ಯೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ವಿಷಯ.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನೂರಾರು ಕೋಟಿ ಅನುದಾನ ಒದಗಿಸಿದ್ದು, ಶಿಕ್ಷಣ, ಆರೋಗ್ಯ, ನೀರಾವರಿ ಸೇರಿ ಜನರ ಕಲ್ಯಾಣಕ್ಕಾಗಿ ಹಗಲಿರುಳು ಸೇವೆ ಸಲ್ಲಿಸುವೆ. ಈಗಾಗಲೇ ಕ್ಷೇತ್ರದ ಬಹುದಿನಗಳ ಬೇಡಿಕೆಯಾದ 74ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಪೂರ್ಣ ಮುಗಿಯುವ ಹಂತ ತಲುಪಿದ್ದು, ಡಿಸೆಂಬರ್‌ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದರು.

ಪಟ್ಟಣದ ವಿವಿಧ ಶಾಲಾ ಮಕ್ಕಳು ನಾಡಿನ ಪರಂಪರೆ ಬಿಂಬಿಸುವ ಪೂಷಾಕಿನಲ್ಲಿ ಭುವನೇಶ್ವರಿ ಭಾವಚಿತ್ರವನ್ನು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಪಟ್ಟಣದ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಪುಷ್ಪ ನಮನ ಸಲ್ಲಿಸಿದರು.

ತಹಸೀಲ್ದಾರ್ ಎಂ.ರೇಣುಕಾ, ತಾಪಂ ಇಒ ಕೆ.ನರಸಪ್ಪ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಉಪಾಧ್ಯಕ್ಷೆ ಲೀಲಾವತಿ ಪ್ರಭಾಕರ, ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್,

ಕರವೇ ಅಧ್ಯಕ್ಷ ಕಾಟೇರ ಹಾಲೇಶ್, ಕಸಾಪ ತಾಲೂಕು ಅಧ್ಯಕ್ಷ ವೀರೇಶ್ ಅಂಗಡಿ, ಸಿಪಿಐ ಸುರೇಶ್ ತಳವಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಸದಸ್ಯರಾದ ಕೆ.ಈಶಪ್ಪ, ಪೂರ್ಯಾ ನಾಯ್ಕ, ಸರಸ್ವತಿ ರಾಘವೇಂದ್ರ, ರೇಣುಕಾ ದುರುಗೇಶ್, ಹಿರೇಕುಂಬಳಗುಂಟೆ ಉಮೇಶ್ ಇತರರಿದ್ದರು.