ಜಿಲ್ಲೆ

ಕರ್ನಾಟಕ ರಾಜ್ಯೋತ್ಸವ 1ರಂದು

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ ವತಿಯಿಂದ ನಗರದ ಆರ್​.ಎನ್​. ಶೆಟ್ಟಿ ಕ್ರೀಡಾಂಗಣದಲ್ಲಿ ನ. 1ರಂದು ಬೆಳಗ್ಗೆ 9 ಗಂಟೆಗೆ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಧ್ವಜಾರೋಹಣ ನೆರವೇರಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ವಿಧಾನ ಪರಿಷತ್​ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಅಬ್ಬಯ್ಯ ಪ್ರಸಾದ, ಎನ್​.ಎಚ್​ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​.ಪಾಟೀಲ್​, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ್​, ಮೇಯರ್​ ರಾಮಪ್ಪ ಬಡಿಗೇರ, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾಧಿಕಾರಿ, ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಆಲೂರು ವೆಂಕಟರಾವ್​ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.