ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಎಂದು ಆಗ್ರಹಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಪ್ರತಿಭಟಿಸಿದರು. 
ಜಿಲ್ಲೆ

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಪ್ರತಿಭಟನೆ

ಅಭಿನಯ್ ಎಚ್.ಎಂ

ಕೊಳ್ಳೇಗಾಲ: ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ಪ್ರಕರಣ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಪಟ್ಟಣದಲ್ಲಿ  ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಜಮಾಯಿಸಿದ್ದ ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಮೆರವಣಿಗೆ ಮೂಲಕ ತೆರಳಿ ತಾಲೂಕು ಕಚೇರಿ ಗ್ರೇಡ್-2 ತಹಸೀಲ್ದಾರ್ ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚೆಯಾಗಬೇಕು. ನ್ಯಾಯಾಲಯ ಮೂಲಕ ಅಪರಾಧಿಗೆ ಮರಣ ದಂಡನೆ ನೀಡಬೇಕು. ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರ ಜೀವನಾಂಶ ನೀಡಬೇಕು. ಅಂತೆಯೆ ರಾಜ್ಯದಲ್ಲೆಡೆ ದಸರಾದಂತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವ್ಯಾಪಾರ ನಡೆಸಲು ಬರುವ ಅಲೆಮಾರಿಗಳಿಗೆ ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ನೀಡಬೇಕು. ಒತ್ತಾಯಿಸಿದರು.

ಮೈಸೂರಿನಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಬೇಕು. ಆಗ ಮಾತ್ರ ಸಾಮಾನ್ಯ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಶಬ್ಬೀರ್ ಪಾಷ, ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಕುಮಾರ್(ಪಪ್ಪಿ), ತಾಲೂಕು ಅಧ್ಯಕ್ಷ ಅಜ್ಗರ್ ಪಾಷ, ತಾಲೂಕು ಉಪಾಧ್ಯಕ್ಷ ವಜಾಹತ್, ಜಿಲ್ಲಾ ಕಾರ್ಯದರ್ಶಿ ಮುಬಾರಕ್ ಅಹಮ್ಮದ್, ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಭಾಗ್ಯಾ, ಕಾರ್ಯದರ್ಶಿ ರಾಧಾ, ಪ್ರಧಾನ ಕಾರ್ಯದರ್ಶಿ ನಾಗವೇಣಿ ,ಮಹಿಳಾ ಮುಖ್ಯಸ್ಥೆ ಎಚ್.ಎನ್.ಶೋಭಾ, ಸದಸ್ಯರಾದ ಸಿ.ಪ್ರಸಾದ್, ಸುದೀಪ್, ಇಮ್ರಾನ್ ಪಾಷ, ರೋಷನ್ ಮತ್ತಿತರಿದ್ದರು.