ಜಿಲ್ಲೆ

ಏ.21ರಂದು ನಗರದಲ್ಲಿ ಕೃತಿ ಬಿಡುಗಡೆ ಸಮಾರಂಭ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಜನದನಿಯ ಐದನೇ ಪ್ರಯೋಗವಾಗಿ ನಿತ್ಯ ಸಚಿವ ನಾಟಕ ಪ್ರದರ್ಶನ ಹಾಗೂ ನಿತ್ಯ ಸಚಿವ ಕೃತಿ ಬಿಡುಗಡೆ ಸಮಾರಂಭ ಏ.21ರಂದು ಸಂಜೆ 5 ಗಂಟೆಗೆ ನಗರದ ಪಿಇಎಸ್ ಕಾಲೇಜಿನ ವಿವೇಕಾನಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ತಿಳಿಸಿದರು.

ನಿತ್ಯಸಚಿವ ಕೆ.ವಿ.ಶಂಕರೇಗೌಡರ ಸಮಕಾಲಿನ ರಾಜಕೀಯದಲ್ಲಿ ದಿ.ದೇವರಾಜ ಅರಸು, ಕೆ.ವಿ.ಶಂಕರಗೌಡ ಹಾಗೂ ರೈತ ನಾಯಕ ನಂಜುಂಡಸ್ವಾಮಿ ಅವರ ನಾಟಕಗಳು ಪ್ರದರ್ಶನಗೊಂಡಿದ್ದು, ಜನರ ಗಮನ ಸೆಳೆದಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಶಂಕರಗೌಡರ ಜೀವನಾಧಾರಿತ ನಾಟಕ ಪ್ರದರ್ಶನ ಮಾಡಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಂಕರಗೌಡರ ಜೀವನಾಧಾರಿತ ನಾಟಕವನ್ನು ಪ್ರೊಫೆಸರ್ ರಾಜಪ್ಪ ದಳವಾಯಿ ರಚಿಸಿದ್ದು, ಪ್ರಮೋದ್ ಶಿಗ್ಗಾವ್ ನಿರ್ದೇಶನ ಮಾಡಿದ್ದಾರೆ. ಅಂದು ಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಕೊಮ್ಮೇರಹಳ್ಳಿ ಶಾಖಾ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರು ನಿತ್ಯ ಸಚಿವ ಕೃತಿ ಬಿಡುಗಡೆ ಮಾಡಲಿದ್ದಾರೆ. ಕಲಾವಿದರು ಮತ್ತು ತಂತ್ರಜ್ಞರಿಗೆ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಗೌರವ ಸಮರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಡಾ.ರಾಮಲಿಂಗಯ್ಯ, ಪ್ರೊ.ಶಂಕರೇಗೌಡ, ಚಂದಗಾಲು ಲೋಕೇಶ್ ಉಪಸ್ಥಿತದಿದ್ದರು.