ಜಿಲ್ಲೆ

ನ.11ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ಹೇಳಿಕೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ನ.11ರಂದು ನಗರದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ತಿಳಿಸಿದರು.

ಅಂದು ಸಂಜೆ 4 ಗಂಟೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಕೊಮ್ಮೇರಹಳ್ಳಿ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಸಂಚಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಸಂಘದ ಕಾರ್ಯದರ್ಶಿ ಚಂದಗಾಲು ಲೋಕೇಶ್, ನಿರ್ದೇಶಕರಾದ ಮಂಜುಳಾ ಉದಯಶಂಕರ್, ಜಯರಾಮು, ಶಿವರಾಜು ಇದ್ದರು.