ಜಿಲ್ಲೆ

ಏ.30ರಂದು ದೊಡ್ಡಬಾಣಸವಾಡಿಯಲ್ಲಿ ಧಾರ್ಮಿಕ ಕೈಂಕರ್ಯ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ವಿವರ

ಕೆ.ಎನ್.ರಾಘವೇಂದ್ರ

ಮಂಡ್ಯ: ತಾಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಸೋಮೇಶ್ವರ ಅಭಿವೃದ್ಧಿ ಸಮಿತಿ ವತಿಯಿಂದ ಏ.30ರಂದು ಸೋಮೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮತ್ತು ನವಗ್ರಹ ದೇವಸ್ಥಾನ, ನಾಗರಕಲ್ಲು, ಅರಳಿ ಕಟ್ಟೆ ಪ್ರತಿಷ್ಠಾಪನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದರು.

ಕಾರ್ಯಕ್ರಮದ ಪ್ರಯುಕ್ತ ದೇವಾಲಯದಲ್ಲಿ ಏ.30ರವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, 30ರಂದು ಮಧ್ಯಾಹ್ನ 12 ಗಂಟೆಗೆ ಅನ್ನದಾಸೋಹವಿರಲಿದೆ. ಅಂದಿನ ಸಮಾರಂಭವದ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಳ್ಳಿ ಶಾಖಾ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಪ್ರಾಸ್ಥಾವಿಕ ನುಡಿಗಳನ್ನಾಡಲಿದ್ದು, ಮೈಸೂರು ಯೋಗನರಸಿಂಹಸ್ವಾಮಿ ದೇವಾಲಯದ ಬಾಷ್ಯಂ ಸ್ವಾಮೀಜಿ, ವೇದಬ್ರಹ್ಮ ಭಾನುಪ್ರಕಾಶ್‌ಶರ್ಮ ಸೇರಿದಂತೆ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ದೊಡ್ಡಬಾಣಸವಾಡಿ ಗ್ರಾಮದ ಯಜಮಾನರಾದ ಬಿ.ಎಸ್.ಕೃಷ್ಣಸ್ವಾಮಿ, ಬಿ.ಎಸ್.ಶಿವರಾಮೇಗೌಡ, ಪಟೇಲ್ ಸಿದ್ದರಾಜು ಇದ್ದರು.