???????????????????????????????????? 
ಜಿಲ್ಲೆ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಹುಬ್ಬಳ್ಳಿ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದ 6ನೇ ಘಟಿಕೋತ್ಸವವನ್ನು ನ. 29ರಂದು ಬೆಳಗ್ಗೆ 11 ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಕುಲಪತಿ ಪ್ರೊ. ಡಿ. ಬಸವರಾಜು ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಽಪತಿ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡುವರು. ಕಾನೂನು ಸಚಿವ ಎಚ್.ಕೆ. ಪಾಟೀಲ ಅತಿಥಿಯಾಗಿ ಪಾಲ್ಗೊಳ್ಳುವರು ಎಂದರು.

ಘಟಿಕೋತ್ಸವದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ, ಡಾ. ಎಂ. ವೀರಪ್ಪ ಮೊಯ್ಲಿ ಹಾಗೂ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದರು.

ಘಟಿಕೋತ್ಸವದಲ್ಲಿ 2,991 ವಿದ್ಯಾರ್ಥಿಗಳು, 2,243 ವಿದ್ಯಾರ್ಥಿನಿಯರು ಸೇರಿ 5,234 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಗುವುದು ಎಂದರು.